ಜನ ಮನದ ನಾಡಿ ಮಿಡಿತ

Advertisement

ಮಂಜೇಶ್ವರ: ಏ. 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ & ರಕ್ತದಾನ ಶಿಬಿರ..!

ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಏಪ್ರಿಲ್ 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.

ಕಾರ್ಯಕ್ರಮವನ್ನು ಹೇರಂಭ ಇಂಡಸ್ಟ್ರೀಸ್ ಸಂಸ್ಥಾಪಕಾಧ್ಯಕ್ಷರು ಹಾಗೂ ಸೇವಾ ಬಳಗದ ಕೇಂದ್ರೀಯ ಸಮಿತಿ ಅಧ್ಯಕ್ಷ ಡಾ. ಸದಾಶಿವ ಕೆ. ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಪಾಧ್ಯಕ್ಷ ನಾರಾಯಣ ನೈಕ್ ನಡುಹಿತ್ಲು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈಸ್ ಚಾನ್ಸಲರ್ ಡಾ. ಸತೀಶ್ ಭಂಡಾರಿ, ಖ್ಯಾತ ಎಲುಬು ತಜ್ಞ ಡಾ. ಅಶ್ವಿನ್ ಶೆಟ್ಟಿ, ಡಾ. ವಿಕ್ರಮ್ ದತ್ತ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಘಟನೆಯ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಮೀಂಜ ಗ್ರಾಮ ಪಂಚಾಯತ್ ಸದಸ್ಯೆ ಶರ್ಮಿಳಾ ಎಂ. ಶೆಟ್ಟಿ, ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ ಹಾಗೂ ಡಾ. ಪುನೀತ ಶೆಟ್ಟಿ ಉಪಸ್ಥಿತರಿರುವರು. ಶಿಬಿರದಲ್ಲಿ ಎಲುಬು ಮತ್ತು ಕೀಲು ಚಿಕಿತ್ಸೆ, ಕಣ್ಣು, ಚರ್ಮ ಹಾಗೂ ಮಕ್ಕಳ ಚಿಕಿತ್ಸೆಯೊಂದಿಗೆ ಇಸಿಜಿ, ಇಎನ್‌ಟಿ ಮತ್ತು ಜನರಲ್ ಮೆಡಿಸಿನ್ ವಿಭಾಗಗಳಲ್ಲಿ ತಜ್ಞರಿಂದ ಉಚಿತ ತಪಾಸಣೆ ನಡೆಯಲಿದೆ. ಅಗತ್ಯ ಔಷಧಿ ಹಾಗೂ ಕನ್ನಡಕ ವಿತರಣೆ ನಡೆಯಲಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!