ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗ ಕೇಂದ್ರೀಯ ಸಮಿತಿ ಹಾಗೂ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದಲ್ಲಿ ಏಪ್ರಿಲ್ 19ರಂದು ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.
ಕಾರ್ಯಕ್ರಮವನ್ನು ಹೇರಂಭ ಇಂಡಸ್ಟ್ರೀಸ್ ಸಂಸ್ಥಾಪಕಾಧ್ಯಕ್ಷರು ಹಾಗೂ ಸೇವಾ ಬಳಗದ ಕೇಂದ್ರೀಯ ಸಮಿತಿ ಅಧ್ಯಕ್ಷ ಡಾ. ಸದಾಶಿವ ಕೆ. ಶೆಟ್ಟಿ ಕುಳೂರು ಕನ್ಯಾನ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಪಾಧ್ಯಕ್ಷ ನಾರಾಯಣ ನೈಕ್ ನಡುಹಿತ್ಲು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ.ಎಸ್ ಹೆಗ್ಡೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈಸ್ ಚಾನ್ಸಲರ್ ಡಾ. ಸತೀಶ್ ಭಂಡಾರಿ, ಖ್ಯಾತ ಎಲುಬು ತಜ್ಞ ಡಾ. ಅಶ್ವಿನ್ ಶೆಟ್ಟಿ, ಡಾ. ವಿಕ್ರಮ್ ದತ್ತ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಂಘಟನೆಯ ಉಪಾಧ್ಯಕ್ಷ ಚಂದ್ರಹಾಸ ಶೆಟ್ಟಿ, ಮೀಂಜ ಗ್ರಾಮ ಪಂಚಾಯತ್ ಸದಸ್ಯೆ ಶರ್ಮಿಳಾ ಎಂ. ಶೆಟ್ಟಿ, ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಾಲತಿ ಹಾಗೂ ಡಾ. ಪುನೀತ ಶೆಟ್ಟಿ ಉಪಸ್ಥಿತರಿರುವರು. ಶಿಬಿರದಲ್ಲಿ ಎಲುಬು ಮತ್ತು ಕೀಲು ಚಿಕಿತ್ಸೆ, ಕಣ್ಣು, ಚರ್ಮ ಹಾಗೂ ಮಕ್ಕಳ ಚಿಕಿತ್ಸೆಯೊಂದಿಗೆ ಇಸಿಜಿ, ಇಎನ್‌ಟಿ ಮತ್ತು ಜನರಲ್ ಮೆಡಿಸಿನ್ ವಿಭಾಗಗಳಲ್ಲಿ ತಜ್ಞರಿಂದ ಉಚಿತ ತಪಾಸಣೆ ನಡೆಯಲಿದೆ. ಅಗತ್ಯ ಔಷಧಿ ಹಾಗೂ ಕನ್ನಡಕ ವಿತರಣೆ ನಡೆಯಲಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…