ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಕೆಎಸ್.ಆರ್.ಟಿ.ಸಿ. ಬಸ್, ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ ಸಂಭವಿಸಿದೆ. ಮೂರ್ಜೆ ಜಂಕ್ಷನ್‌ನಲ್ಲಿ ಮೂರ್ಜೆ ಕಡೆಯಿಂದ ಬರುತ್ತಿದ್ದ ಗೂಡ್ಸ್ ರಿಕ್ಷಾ ಹೆದ್ದಾರಿಗೆ ಎಂಟ್ರಿ ಕೊಡುತ್ತಿದ್ದ ವೇಳೆ ಮಡಂತ್ಯಾರು ಕಡೆಯಿಂದ ಬರುತ್ತಿದ್ದ ಬಸ್ ನಿಯಂತ್ರಣ ಸಾಧಿಸಲು ಸಾಧ್ಯವಾಗದೆ ಗೂಡ್ಸ್ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಇದೇ ವೇಳೆ ಬಿಸಿರೋಡು ಕಡೆಯಿಂದ ಬರುತ್ತಿದ್ದ ದ್ವಿಚಕ್ರಗಳು ವಾಹನ ರಿಕ್ಷಾಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಹಾಗೂ ದ್ವಿಚಕ್ರ ವಾಹನಗಳು ಪಲ್ಟಿಯಾಗಿದ್ದು, ದ್ವಿಚಕ್ರ ವಾಹನ ಸವಾರರು ಹಾಗೂ ರಿಕ್ಷಾ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸಿ.ಸಿ. ಕ್ಯಾಮಾರದಲ್ಲಿ ಸೆರೆಯಾದ ಅಪಘಾತದ ವಿಡಿಯೋ ಸಾಮಾಜಿಕ ಜಲಾತಾಣದಲ್ಲಿ ವೈರಲ್ ಆಗಿದೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…