ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು, ಒಂದು ವರ್ಷದ ನಂತರ ಘಟನೆ ಬೆಳಕಿಗೆ ಬಂದಿದೆ.
ಮೃತ ನುಣಕಮ್ಮ ಎಂಬುವವರ ಅಣ್ಣನ ಮಗಳು ನಾಗಲಕ್ಷ್ಮಿ ಮತ್ತು ಆಕೆಯ ಪ್ರಿಯಕರ, ಆಂಧ್ರಪ್ರದೇಶದ ಮಡಕಸಿರ ನಿವಾಸಿ ಅಶೋಕ್ ಕುಮಾರ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ನುಣಕಮ್ಮ ಅವರಿಗೆ ಗಂಡ ಮತ್ತು ಮಕ್ಕಳಿರಲಿಲ್ಲ, ಅವರು ತಮ್ಮ ಅಣ್ಣನ ಮನೆಯಲ್ಲಿ ವಾಸವಿದ್ದರು. ಸೆಪ್ಟೆಂಬರ್ 20 ನುಣಕಮ್ಮ ಅವರಿಗೆ ಪಿಡ್ಸ್ ಬರುತ್ತಿದೆ, ಚಿಕಿತ್ಸೆ ಕೊಡಿಸುತ್ತೇವೆ ಎಂದು ನಂಬಿಸಿದ ಆರೋಪಿಗಳು ಅವರನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ನುಣಕಮ್ಮಳ ಬಳಿ ಇದ್ದ ಮನೆಯ ಬೀರು ಬೀಗ ತೆಗೆದುಕೊಂಡು, ಆಕೆಯ ಮನೆಯಲ್ಲಿದ್ದ ಹಣ, ಚಿನ್ನಾಭರಣ ಕಳ್ಳತನ ಮಾಡಿ ನೆಮ್ಮದಿಯಾಗಿದ್ದರು. ಕೊಲೆ ಮಾಡಿದ ನಾಲ್ಕು ದಿನಗಳ ನಂತರ ಮತ್ತೆ ವಾಪಸ್ ಬಂದು ಶವವನ್ನು ಪೆಟ್ರೋಲ್ ಹಾಕಿ ಸುಟ್ಟು ಗುರುತು ಸಿಗದಂತೆ ಮಾಡಿದ್ದರು. ನಂತರ ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದರು. ಆದರೆ ಪೊಲೀಸರು ವರ್ಷದ ನಂತರ ಇಬ್ಬರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಅರಣ್ಯದಲ್ಲಿ ಪತ್ತೆಯಾಗಿದ್ದ ಬುರುಡೆ ಮತ್ತು ಮೂಳೆಗಳ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಸುಮಾರು ಒಂದು ವರ್ಷದ ನಂತರ ಮೃತ ಮಹಿಳೆಯ ಗುರುತು ಪತ್ತೆಹಚ್ಚಿ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…