ಜನ ಮನದ ನಾಡಿ ಮಿಡಿತ

Advertisement

ಪುತ್ತೂರು ಉಸ್ಮಾನ್ ಹತ್ಯೆ ಪ್ರಕರಣ- ಅಣ್ಣನನ್ನೇ ಕೊಂದ ಮೂರನೇ ಆರೋಪಿ ಮುಬಾರಕ್ ಬಂಧನ..!

ಪುತ್ತೂರು: ಎರಡು ವಾರಗಳ ಹಿಂದೆ ಚೆಂಬು ಗ್ರಾಮದ ಕುದುರೆಪಾಯದಲ್ಲಿ ಸಹೋದರರಿಂದ ಹತ್ಯೆಗೀಡಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಸುಳ್ಯ ಕಾಲೇಜು ಸಮೀಪದ ನಿವಾಸಿ ಮುಬಾರಕ್ (37) ಬೆಂಗಳೂರಿನಲ್ಲಿ ಬೇಕರಿ ನಡೆಸುತಿದ್ದ. ಕರೋನಾ ಅವಧಿಯ ನಂತರ, ಬೇಕರಿ ಮುಚ್ಚಿ ಊರಿಗೆ ಬಂದು ನೆಲೆಸಿದ್ದ ಇವರಲ್ಲಿ ಬ್ರೆಡ್ ಹಾಗೂಮತ್ತಿತ್ತರ ವಸ್ತುಗಳನ್ನು ಕತ್ತರಿಸುವ ಚೂಪಾದ ಕತ್ತಿಯಿತ್ತು ಮತ್ತು ಕೊಲೆಯ ಹಿಂದಿನ ದಿನವೇ ಮುಬಾರಕ್ ತನ್ನ ಚಿಕ್ಕಪ್ಪ ಮತ್ತು ದೊಡ್ಡಪ್ಪನಿಗೆ ಚಾಕು ನೀಡಿದ್ದ ಎನ್ನಲಾಗಿದೆ.
ಉಸ್ಮಾನ್‌ರನ್ನು ಕೊಲೆಗೈಯ್ಯಲು ಆತನ ಸಹೋದರಾದ ರಫೀಕ್ ಮತ್ತು ಸತ್ತಾರ್ ಬಳಸಿ ಚೂರಿಯನ್ನು ಮುಬಾರಕ್ ಒದಗಿಸಿದ್ದನೆಂದು ಪೊಲೀಸರು ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.
ಕೊಲೆ ಪ್ರಕರಣದ ತನಿಖಾಧಿಕಾರಿ ಮಡಿಕೇರಿ ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ್ ಉಪ್ಪಳಿಕೆ ಅವರು ಜೂ.27ರಂದು ಸುಳ್ಯದಲ್ಲಿ ದಾಳಿ ನಡೆಸಿ ಮುಬಾರಕ್ ನನ್ನು ಬಂಧಿಸಿದ್ದರು. ಆರೋಪಿಯನ್ನು ನಿನ್ನೆ ಮಡಿಕೇರಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!