ಬೆಳ್ತಂಗಡಿ ತಾಲೂಕಿನಲ್ಲಿ ಸೋಮವಾರ ಸಂಜೆ, ಗುಡುಗು, ಸಿಡಿಲು ಸಹಿತ ಬಾರೀ ಮಳೆಯಾಗಿದ್ದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಉಜಿರೆಯ ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಮರದ ಬೃಹತ್ ಗಾತ್ರದ ರೆಂಬೆಯೊಂದು ಮುರಿದುಬಿದ್ದಿದೆ. ಕಾರಿಗೆ ಹಾನಿಯಾಗಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪತ್ರಕರ್ತರೊಬ್ಬರು ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮುಂಡಾಜೆ ಗ್ರಾ. ಪಂ. ವ್ಯಾಪ್ತಿಯ ಚಾಮುಂಡಿ ನಗರ ಪರಿಸರದಲ್ಲಿ ರಾಮಕ್ಕ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದೆ. ಈ ಪ್ರದೇಶದ ಇನ್ನೂ ನಾಲ್ಕು ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. ದಿಡುಪೆ-ಮುಂಡಾಜೆ ರಸ್ತೆಯ ಕುರುಡ್ಯ ಎಂಬಲ್ಲಿ ರಸ್ತೆಗೆ ಮರ ಬಿದ್ದು ಸಂಚಾರ ವ್ಯತ್ಯಯ ಉಂಟಾಯಿತು. ಮಂಜುಶ್ರೀ ನಗರದ ಶ್ರೀಪತಿ ಆಚಾರ್ಯ ಎಂಬವರ ಮನೆ ಮೇಲೆ ತೆಂಗಿನ ಮರ ಮುರಿದುಬಿದ್ದು ಹಾನಿ ಉಂಟಾಗಿದೆ. ದಿನೇಶ್ ಆಚಾರ್ಯ ಎಂಬವರ ಕಾರಿನ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಕುಳೂರು ಪ್ರದೇಶದ ರಾಧಾ ಪೂಜಾರಿ ಎಂಬವರ ಮನೆಯ ಹೆಂಚುಗಳು ಗಾಳಿಗೆ ಹಾರಿಹೋಗಿವೆ. ಮನೆ ಪರಿಸರದಲ್ಲಿ ನಾಲ್ಕು ಮರಗಳು ಉರುಳಿ ಬಿದ್ದ ಬಗ್ಗೆ ವರದಿಯಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…