ಮುಂಡತಿಕ್ಕೋಡುವಿನ ಪಟಾಕಿ ಸಂಗ್ರಹಣಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ ನಂತರ, ತ್ರಿಶೂರ್ ಪೂರಂ ಉತ್ಸವದ ಪಟಾಕಿ ಪ್ರದರ್ಶನವನ್ನು ನಡೆಸುವ ಬಗ್ಗೆ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ದೇವಸ್ವಂಗಳ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದ ತ್ರಿಶೂರ್ ಜಿಲ್ಲೆಯ ಮುಂಡತ್ತಿಕೋಡ್‌ನಲ್ಲಿ ನಿನ್ನೆ ಸಂಭವಿಸಿದ ಪಟಾಕಿಗಳ ಸ್ಫೋಟದಲ್ಲಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಈ ಸ್ಫೋಟವು ತಿರುವಾಂಬಾಡಿ ದೇವಸ್ಥಾನದ ಬಳಿ ಸಂಭವಿಸಿದೆ, ಇದೇ ತಿಂಗಳ 24 ರಂದು ನಡೆಯಲಿರುವ ತ್ರಿಶೂರ್ ಪೂರಂ ಹಬ್ಬದ ಪ್ರಯುಕ್ತ ಪಟಾಕಿಗಳನ್ನು ತಿರುವಾಂಬಾಡಿ ದೇವಸ್ಥಾನದ ಬಳಿ ಶೆಡ್ಡ್ ನಿರ್ಮಿಸಿ ಸಂಗ್ರಹಿಸಿ ಇಡಲಾಗಿತ್ತು. ಇದರಿಂದ ಸ್ಫೋಟ ಉಂಟಾಗಿ ಸುತ್ತಲೂ ಬೆಂಕಿ ಆವರಿಸಿದೆ.
ಬೆಂಕಿ ಹೊತ್ತಿಕೊಂಡ ಕೂಡಲೆ ಸಾಲುಸಾಲಾಗಿ ಪಟಾಕಿಗಳು ಸ್ಫೋಟಗೊಳ್ಳುವ ಸದ್ದು ಹಲವಾರು ಕಿಲೋಮೀಟರ್‌ಗಳವರೆಗೆ ಕೇಳಿಬರುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ. ಇಲ್ಲಿಯವರೆಗೆ ಸುಮಾರು 13 ಜನರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ 8 ಜನ ಗಂಭೀರ ಸ್ಥಿತಿಯಲ್ಲಿದ್ದಾರೆ. ಒಟ್ಟು 23 ಗಾಯಾಳುಗಳನ್ನು ತ್ರಿಶೂರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಸಮಯದಲ್ಲಿ ಸುಮಾರು 30 ರಿಂದ 40 ಜನರು ಸ್ಥಳದಲ್ಲಿದ್ದರು ಎಂದು ಜಿಲ್ಲಾಧಿಕಾರಿ ಶಿಖಾ ಸುರೇಂದ್ರನ್ ಹೇಳಿದ್ದಾರೆ.
ಸ್ಫೋಟದ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ. ರಕ್ಷಣಾ ಕಾರ್ಯಾಚರಣೆಗಳು ವೇಗದಲ್ಲಿ ಮುಂದುವರೆದಿದ್ದು, ಪೊಲೀಸ್, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು, ಆರೋಗ್ಯ ಇಲಾಖೆ, ಕಂದಾಯ ಅಧಿಕಾರಿಗಳು ಮತ್ತು ವಿಪತ್ತು ನಿರ್ವಹಣಾ ತಂಡಗಳು ಸೇರಿದಂತೆ ಹಲವಾರು ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ. ಪರವಾನಗಿ ಹೊಂದಿರುವ ಮುಂಡತಿಕ್ಕೋಡ್ ಸತೀಶ್ ಸೇರಿದಂತೆ ಗಾಯಗೊಂಡವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…