ಎರಡು ದಿನಗಳ ಹಿಂದೆ ಮಡಂತ್ಯಾರು ಸಮೀಪದ ಪಾರೆಂಕಿ ಎಂಬಲ್ಲಿ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.
ಪಾರೆಂಕಿ ನಿವಾಸಿ ಕೃಷ್ಣ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಎ.20 ರಂದು ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಾರಿಗುಡಿ ರಾಮನಗರ ಕ್ರಾಸ್ ಬಳಿಯಲ್ಲಿ ಸೈಪುದ್ದೀನ್ ಎಂಬಾತ ವಾಹನವೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮಡಂತ್ಯಾರುವಿನಿಂದ ಬಳ್ಳಮಂಜ ಕಡೆಗೆ ಅಜಾಗರೂಕತೆಯಿಂದ ಹಾಗೂ ನಿರ್ಲಕ್ಷ್ಯತನದಿಂದ ಬೈಕ್‌ನ್ನು ಚಲಾಯಿಸಿಕೊಂಡು ಬಂದು ಬಳ್ಳಮಂಜ ಕಡೆಯಿಂದ ಮಡಂತ್ಯಾರು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ.
ಈ ಸಂದರ್ಭದಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಅವರನ್ನು ಮಂಗಳೂರು ಖಾಸಗಿ ಆಸ್ಪ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…