ತಣ್ಣೀರುಬಾವಿ ಬೀಚ್ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಕಸಬಾ ಬೆಂಗ್ರೆ ನಿವಾಸಿ ಚಂದು ಹಾರೀಸ್ ಬಂಧಿತ ಆರೋಪಿ. ಆರೋಪಿಯಿಂದ ಸುಲಿಗೆ ಮಾಡಿದ ವಸ್ತುಗಳಾದ ಸ್ಮಾರ್ಟ್ ವಾಚ್, ಪವರ್ ಬ್ಯಾಂಕ್ ಮತ್ತು ಕೃತ್ಯಕ್ಕೆ ಬಳಸಿದ ಬೈಕ್ ವಶಕ್ಕೆ ಪಡೆಯಲಾಗಿದೆ. ಆರೋಪಿಯ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈತನ ವಿರುದ್ಧ ಪಣಂಬೂರು ಠಾಣೆಯಲ್ಲಿ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ. ಈತನ ವಿರುದ್ಧ ನ್ಯಾಯಾಲಯದಲ್ಲಿ ಹಳೆಯ ಪ್ರಕರಣಗಳಲ್ಲಿ ಮೂರು ವಾರೆಂಟ್‌ಗಳು ಕೂಡ ಜಾರಿಯಾಗಲು ಬಾಕಿ ಇದೆ. ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ತನಿಖೆ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಪ್ರತಿವರ್ಷ ಆಯೋಜಿಸಲಾಗುವ ಪಿ.ಪಿ. ಗೋಮತಿ ಸ್ಮಾರಕ ಉಪನ್ಯಾಸ ಮಾಲಿಕೆ-2026ರ ಅಂಗವಾಗಿ ಖ್ಯಾತ ಲೇಖಕಿ ಹಾಗೂ ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ…
ಪದವಿನಂಗಡಿ ಪರಿಸರದಲ್ಲಿರುವ ಮನೆಯಿಂದ ಎಂಡಿಎಂಎ ಮಾದಕವಸ್ತುವನ್ನು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು,…
ಮಂಗಳೂರು ನಗರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಗಳೂರು ನಗರ ಅಪರಾಧ…
ಛಾವಣಿಯ ಶೀಟ್‌ಗಳನ್ನು ಹಾಕುವಾಗ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ್ದ ಘಟನೆ ಕಡೆಪಲ್ಲದಲ್ಲಿ ಸಂಭವಿಸಿದೆ. ಮೃತನನ್ನು ಮಾರ್ಪಾಡಿ…
ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸ್ ಒಂದು ಕ್ಯಾಂಟರ್‌ಗೆ ಢಿಕ್ಕಿ ಹೊಡೆದ ಘಟನೆ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ನಡೆದಿದೆ. ಆಂಬುಲೆನ್ಸ್…
ಪೊಳಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇವರ ವಾರಸುದಾರರಿದ್ದಲ್ಲಿ ಪೊಲೀಸ್ ಠಾಣೆ ಸಂಪರ್ಕ ಮಾಡುವಂತೆ ಕೋರಲಾಗಿದೆ. ಒಂಟಿಯಾಗಿ ವಾಸಿಸುತ್ತಿದ್ದ ಡೊಂಬಯ್ಯ ಮೃತಪಟ್ಟವರು.…