ಕರಾವಳಿ

ಬಂಟ್ವಾಳ: ಮಹಿಳೆಯರ ಹಕ್ಕುಗಳ ಬಗ್ಗೆ ಬಿಜೆಪಿ ಮೋಸ- ರಮಾನಾಥ ರೈ ಆರೋಪ….!

ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ಬಿ.ಸಿ.ರೋಡು ಪ್ಲೈ ಓವರ್ ನ ಕೆಳಭಾಗದಲ್ಲಿ ಎ.24ರಂದು 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದೇ ದೇಶದ ಮಹಿಳೆಯರಿಗೆ ಸುಳ್ಳು ಹೇಳಿ ದ್ರೋಹ ಮಾಡಿದ ಬಿಜೆಪಿ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದೆ.

ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆ ನೀಡಿದೆ, ಆದರೆ ಬಿಜೆಪಿಯಾಗಲಿ ಅಥವಾ ಆರ್.ಎಸ್.ಎಸ್. ಆಗಲಿ ಮಹಿಳೆಯರಿಗೆ ನೀಡಿದ ಅವಕಾಶಗಳ ಬಗ್ಗೆ ತಿಳಿಸಲಿ.

ಆದರೆ ಬಿಜೆಪಿ ಮಹಿಳೆಯರ ಮೀಸಲಾತಿ ವಿಚಾರವನ್ನು ಜನರ ಮುಂದಿಟ್ಟು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಆರೋಪ ಮಾಡಿದ್ದಾರೆ. ದಕ್ಷಿಣ ಭಾರತದಲ್ಲಿ ಬಿಜೆಪಿ ಪಕ್ಷದ ವಿಚಾರಗಳಿಲ್ಲದೆ ಕೊರತೆಗಳನ್ನು ಎದುರುಸುತ್ತಿದ್ದು, ನಿವಾರಿಸಲು ಮಹಿಳಾ ಮೀಸಲಾತಿ ತಂತ್ರವನ್ನು ಮಾಡಿದ್ದಲ್ಲದೆ, ಕಾಂಗ್ರೆಸ್ ನ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ. ಇನ್ನು ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧ್ಯಕ್ಷೆ ಉಷಾ ಅಂಚನ್, ಪ್ರಮುಖರಾದ ಆರ್.ಪದ್ಮರಾಜ್, ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…

7 hours ago

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…

8 hours ago

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…

9 hours ago

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…

12 hours ago

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…

12 hours ago

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…

12 hours ago