ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ.
ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಉಪನ್ಯಾಸಕ ಗಣಪತಿ ಭಟ್ ಶಿರಸಿ ಮೂಲದವರಾಗಿದ್ದು, ಅವಿವಾಹಿತರಾಗಿದ್ದಾರೆ. ಇವರು ಸಂಸ್ಕೃತ ಭಾಷೆಯ ಉಪನ್ಯಾಸಕರಾಗಿದ್ದರು. ಎಂ.ಜಿ.ಎಂ ಕಾಲೇಜಿನ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೃತರು ನಾಪತ್ತೆಯಾದ ಬಗ್ಗೆ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಗ್ನಿ ಶಾಮಕ ದಳದ ನೆರವಿನಿಂದ ಶವವನ್ನು ಮೇಲಕೆತ್ತಾಲಾಗಿದೆ. ನಗರ ಪೋಲಿಸ್ ಠಾಣೆಯ ಎಸ್ ಐ ನಾರಾಯಣ, ಗಣೇಶ ಡಿ, ತನಿಖಾ ಸಹಾಯಕಿ ಜಾಸ್ವ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…