ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 4ನೇ ತಿರುವಿನಲ್ಲಿ ಭೀಕರ ಬಸ್ ಅಪ*ಘಾತ…!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಧರ್ಮಸ್ಥಳದಿಂದ ಆಂಧ್ರಪ್ರದೇಶದ ಕಡೆಗೆ ಪ್ರಯಾಣಿಸುತ್ತಿದ್ದ ಬಸ್, ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎನ್ನಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಆಂಧ್ರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಧರ್ಮಸ್ಥಳ ಮಂಜುನಾಥೇಶ್ವರನ ದರ್ಶನ ಮುಗಿಸಿ ತಮ್ಮ ಊರಿಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ರಕ್ಷಣೆಗೆ ಧಾವಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸುಮಾರು 5 ರಿಂದ 6 ಆಂಬುಲೆನ್ಸ್ ಗಳು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ರವಾನಿಸಿವೆ. ಗಾಯಾಳುಗಳನ್ನು ಕಕ್ಕಿಂಜೆಯ ಕೃಷ್ಣ ಆಸ್ಪತ್ರೆ ಹಾಗೂ ಬೆಳ್ತಂಗಡಿಯ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಈವರೆಗೆ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಾಟಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!