ಕಾರವಾರ – ಮಂಗಳೂರು- ಬೆಂಗಳೂರು ಮಧ್ಯೆ ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅದೇ ರೈಲಲ್ಲಿ ಪ್ರಯಾಣಿಸುತ್ತಿದ್ದ ಕೆಲವು ಮಹಿಳೆಯರು ಸೇರಿ ಹೆರಿಗೆ ಮಾಡಿಸಿದ ಘಟನೆ ಮಂಗಳೂರಿನ ಬಂಟ್ವಾಳ ಸಮೀಪದ ಬಿಸಿರೋಡ್ ಬಳಿ ನಡೆದಿದೆ.
ಮಂಗಳೂರು ಜಂಕ್ಷನ್‌ನಿಂದ ಹೊರಟ ರೈಲಿನಲ್ಲಿ ಮೈಸೂರು ಮೂಲದ ತುಂಬು ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿದೆ. ರೈಲು ಬಿ.ಸಿ.ರೋಡ್ ತಲುಪಿದಾಗ ಗರ್ಭಿಣಿಗೆ ತೀವ್ರ ರಕ್ತಸ್ರಾವವಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣ ರೈಲು ಸಂಚಾರವನ್ನು ಸ್ಥಗಿತಗೊಳಿಸಿ ಸುಮಾರು 30 ನಿಮಿಷಗಳ ಕಾಲ ವೈದ್ಯರಿಗಾಗಿ ಕಾಯಲಾಯಿತು.
ಆದರೆ ಸಕಾಲಕ್ಕೆ ವೈದ್ಯಕೀಯ ಚಿಕಿತ್ಸೆ ಲಭಿಸದ ಕಾರಣ ರೈಲಿನಲ್ಲಿದ್ದ ಇಬ್ಬರು ಮಹಿಳೆಯರು ಧೈರ್ಯದಿಂದಲೇ ಹೆರಿಗೆ ಮಾಡಿಸಲು ಮುಂದಾದರು. ತಕ್ಷಣ ಅವರು ರೈಲಿನ ಬೋಗಿಗೆ ಪರದೆ ಕಟ್ಟಿ ಹೆರಿಗೆಗಾಗಿ ಪ್ರಯತ್ನಿಸಿದರು. ರಕ್ತಸ್ರಾವವಾಗುತ್ತಿದ್ದರೂ ಧೃತಿಗೆಡದೆ ಪ್ರಯತ್ನ ಮುಂದುವರಿಸಿದರು. ಅವರೊಂದಿಗೆ ರೈಲಿನಲ್ಲಿದ್ದ ಇತರ ಮಹಿಳೆಯರೂ ಸಹಕರಿಸಿದರು. ಕೊನೆಗೂ ಸಹಜ ಹೆರಿಗೆ ಮಾಡಿಸುವಲ್ಲಿ ಮಹಿಳೆಯರ ತಂಡ ಯಶಸ್ವಿಯಾಯಿತು. ಬಳಿಕ ತಾಯಿ-ಮಗುವನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. **
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…