ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಹೆರ್ಗಾ ಗ್ರಾಮದ ನಾರಾಯಣ ಪೂಜಾರಿ ಎಂಬವರ ಮಗ ಸುಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿ ಬಾಡಿಗೆ ಕೆಲಸ ಮಾಡಿಕೊಂಡಿದ್ದ ಇವರು, ಕೆಲಸಕ್ಕೆ ಮನೆಯಿಂದ ಹೋಗಿದ್ದರು. ಬಳಿಕ ಅವರು ಹೋಳೆಬಾಗಿಲು ನದಿಗೆ ಈಜಲು ಹೋಗಿದ್ದು, ಅಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಹುಡುಕಾಟ ನಡೆಸಿದಾಗ ಬೆಳಗ್ಗೆ 7 ಗಂಟೆ ಸುಮಾರಿಗೆ ನದಿಯ ಕಿನಾರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…