ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಪ್ಲಾಸ್ಟಿಕ್ ಗೋಡೌನ್’ನಲ್ಲಿ ಸಂಭವಿಸಿದ ಅಗ್ನಿ ಅವಘಡ..!

ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯ ಮುಂಭಾಗದ ಮರಗಳು ಹಾಗೂ ಕಬ್ಬಿಣದ ಗೇಟ್‌ಗಳು ಕೂಡ ಹೊತ್ತಿ ಉರಿದಿವೆ. ಗೋಡೌನ್ ಪಕ್ಕದಲ್ಲೇ ಸುಮಾರು 50 ಯುವತಿಯರು ವಾಸವಿದ್ದ ಲೇಡಿಸ್ ಪಿಜಿ ಇತ್ತು. ಬೆಂಕಿಯ ಕೆನ್ನಾಲಿಗೆ ಮತ್ತು ದಟ್ಟ ಹೊಗೆ ಪಿಜಿಯ ಒಳಗೂ ಆವರಿಸುತ್ತಿದ್ದಂತೆ ಯುವತಿಯರು ತೀವ್ರ ಗಾಬರಿಗೊಂಡಿದ್ದಾರೆ.

ಹೊರಗೆ ಬರಲು ದಾರಿಯಿಲ್ಲದೆ ಆತಂಕಗೊಂಡ ಕೆಲ ಯುವತಿಯರು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ಇನ್ನೂ ಕೆಲವರು ಪ್ರಾಣ ಉಳಿಸಿಕೊಳ್ಳಲು ಪಿಜಿಯ ಕಂಪೌಂಡ್ ಗೋಡೆ ಹಾರಿ ಹೊರಬಂದಿದ್ದಾರೆ. ಗೋಡೆ ಹಾರುವ ಮತ್ತು ಜಿಗಿಯುವ ಸಂದರ್ಭದಲ್ಲಿ ಕೆಲವು ಯುವತಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!