ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಪಕ್ಕದ ಲೇಡಿಸ್ ಪಿಜಿಗೂ ಹಬ್ಬಿದ ಪರಿಣಾಮ ಯುವತಿಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ಲಾಸ್ಟಿಕ್ ವಸ್ತುಗಳಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ಅಕ್ಕಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಮನೆಯ ಮುಂಭಾಗದ ಮರಗಳು ಹಾಗೂ ಕಬ್ಬಿಣದ ಗೇಟ್‌ಗಳು ಕೂಡ ಹೊತ್ತಿ ಉರಿದಿವೆ. ಗೋಡೌನ್ ಪಕ್ಕದಲ್ಲೇ ಸುಮಾರು 50 ಯುವತಿಯರು ವಾಸವಿದ್ದ ಲೇಡಿಸ್ ಪಿಜಿ ಇತ್ತು. ಬೆಂಕಿಯ ಕೆನ್ನಾಲಿಗೆ ಮತ್ತು ದಟ್ಟ ಹೊಗೆ ಪಿಜಿಯ ಒಳಗೂ ಆವರಿಸುತ್ತಿದ್ದಂತೆ ಯುವತಿಯರು ತೀವ್ರ ಗಾಬರಿಗೊಂಡಿದ್ದಾರೆ.
ಹೊರಗೆ ಬರಲು ದಾರಿಯಿಲ್ಲದೆ ಆತಂಕಗೊಂಡ ಕೆಲ ಯುವತಿಯರು ಮೊದಲ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ಇನ್ನೂ ಕೆಲವರು ಪ್ರಾಣ ಉಳಿಸಿಕೊಳ್ಳಲು ಪಿಜಿಯ ಕಂಪೌಂಡ್ ಗೋಡೆ ಹಾರಿ ಹೊರಬಂದಿದ್ದಾರೆ. ಗೋಡೆ ಹಾರುವ ಮತ್ತು ಜಿಗಿಯುವ ಸಂದರ್ಭದಲ್ಲಿ ಕೆಲವು ಯುವತಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…