ಜನ ಮನದ ನಾಡಿ ಮಿಡಿತ

Advertisement

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಭರವಸೆಯ ನುಡಿ -‘500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು’

ವಿದ್ಯಾಗಿರಿ: ‘ಆಳ್ವಾಸ್ ಪದವಿ ಪೂರ್ವಕಾಲೇಜಿನ 500ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿ ಸರ್ಕಾರಿ ಕೋಟಾದ ಅಡಿಯಲ್ಲಿ ವೈದ್ಯಕೀಯ ಸೀಟು ಪಡೆಯುವ ಭರವಸೆ ಇದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.
ಆಳ್ವಾಸ್ ಪದವಿ ಪೂರ್ವಕಾಲೇಜು ಶುಕ್ರವಾರ ಹಮ್ಮಿಕೊಂಡ ಪೋಷಕ- ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳಿಗೆ ಗುರಿ ಸಾಧಿಸಲು ನಿರೀಕ್ಷೆ ಮತ್ತು ಕನಸು ಬೇಕು. ಆಗ ಮಾತ್ರ ಕನಸು ನನಸಾಗಲು ಸಾಧ್ಯ. ಆದರೆ, ಇನ್ನೊಬ್ಬರ ಜೊತೆ ನಿಮ್ಮನ್ನು ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿ ವ್ಯಕ್ತಿಯೂ ಅನನ್ಯ. ಅದಕ್ಕಾಗಿ ಗುರಿಯೆಡೆಗಿನ ನಡೆಗೆ ನಿಮ್ಮ ಸಮಯ ಮೀಸಲಿಡಿ’ಎಂದು ಹಿತವಚನ ಹೇಳಿದರು.

‘ವಿದ್ಯಾರ್ಥಿ ಜೀವನವು ಅತ್ಯಮೂಲ್ಯ ಸಮಯವಾಗಿದ್ದು, ಗಾಸಿಪ್ ಆಲಿಸಿಕೊಂಡು ವ್ಯರ್ಥ ಮಾಡಬೇಡಿ. ನಿಮಗೆ ಮಾರ್ಗದರ್ಶನ ಮಾಡಲು, ಸಂಯೋಜಕರು, ಉಪನ್ಯಾಸಕರು ಇದ್ದಾರೆ. ಅವರ ಮಾತು ಕೇಳಿ’ಎಂದು
ಸಲಹೆ ನೀಡಿದರು. ‘ಪೋಷಕರು ಮಕ್ಕಳ ಮೇಲೆ ಒತ್ತಡ ಹೇರುವ ಬದಲಾಗಿ ಪ್ರೋತ್ಸಾಹಿಸಬೇಕು. ಪ್ರೋತ್ಸಾಹವು ಮಕ್ಕಳಿಗೆ ಹುರುಪು ನೀಡುತ್ತದೆ. ಗುರಿಯೆಡೆಗಿನ ಪಯಣ ಸರಳವಾಗುತ್ತದೆ’ ಎಂದರು. ‘ಪ್ರಯತ್ನಕ್ಕೆ ಎಲ್ಲವೂ ಸಾಧ್ಯ’ಎಂದ ಅವರು, ‘ಎಸ್ಸೆಸ್ಸಲ್ಸಿಗಿಂತ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಬೇಕು. ಎನ್‌ಸಿಆರ್‌ಟಿ ಪಠ್ಯಕ್ರಮ, ಫೌಂಡೇಷನ್ ಕೋರ್ಸ್, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು
ಗಮನ ಹರಿಸಿ’ಎಂದರು. ಅಪರಾಹ್ನ ಪೋಷಕರು ತಮ್ಮ ಮಕ್ಕಳ ಪ್ರಗತಿಯ ಕುರಿತು ಶಿಕ್ಷಕರುಗಳ ಜೊತೆ ಸಮಾಲೋಚನೆ ನಡೆಸಿದರು. ದೇಶದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ್ದ 1450ಕ್ಕೂ ಅಧಿಕ ಪೋಷಕರುಗಳಿಗೆ ಸಂಸ್ಥೆಯ ವತಿಯಿಂದ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆಳ್ವಾಸ್ ಪದವಿಪೂರ್ವಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್, ವಿವಿಧ ಸಂಯೋಜಕರುಗಳು ಇದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!