ವಿದ್ಯಾಗಿರಿ: ‘ಆಳ್ವಾಸ್ ಪದವಿ ಪೂರ್ವಕಾಲೇಜಿನ 500ಕ್ಕೂ ಅಧಿಕ ವಿದ್ಯಾರ್ಥಿಗಳು ಈ ಬಾರಿ ಸರ್ಕಾರಿ ಕೋಟಾದ ಅಡಿಯಲ್ಲಿ ವೈದ್ಯಕೀಯ ಸೀಟು ಪಡೆಯುವ ಭರವಸೆ ಇದೆ’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು.
ಆಳ್ವಾಸ್ ಪದವಿ ಪೂರ್ವಕಾಲೇಜು ಶುಕ್ರವಾರ ಹಮ್ಮಿಕೊಂಡ ಪೋಷಕ- ಶಿಕ್ಷಕರ ಸಭೆಯಲ್ಲಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳಿಗೆ ಗುರಿ ಸಾಧಿಸಲು ನಿರೀಕ್ಷೆ ಮತ್ತು ಕನಸು ಬೇಕು. ಆಗ ಮಾತ್ರ ಕನಸು ನನಸಾಗಲು ಸಾಧ್ಯ. ಆದರೆ, ಇನ್ನೊಬ್ಬರ ಜೊತೆ ನಿಮ್ಮನ್ನು ಹೋಲಿಕೆ ಮಾಡಿಕೊಳ್ಳಬೇಡಿ. ಪ್ರತಿ ವ್ಯಕ್ತಿಯೂ ಅನನ್ಯ. ಅದಕ್ಕಾಗಿ ಗುರಿಯೆಡೆಗಿನ ನಡೆಗೆ ನಿಮ್ಮ ಸಮಯ ಮೀಸಲಿಡಿ’ಎಂದು ಹಿತವಚನ ಹೇಳಿದರು.
‘ವಿದ್ಯಾರ್ಥಿ ಜೀವನವು ಅತ್ಯಮೂಲ್ಯ ಸಮಯವಾಗಿದ್ದು, ಗಾಸಿಪ್ ಆಲಿಸಿಕೊಂಡು ವ್ಯರ್ಥ ಮಾಡಬೇಡಿ. ನಿಮಗೆ ಮಾರ್ಗದರ್ಶನ ಮಾಡಲು, ಸಂಯೋಜಕರು, ಉಪನ್ಯಾಸಕರು ಇದ್ದಾರೆ. ಅವರ ಮಾತು ಕೇಳಿ’ಎಂದು
ಸಲಹೆ ನೀಡಿದರು. ‘ಪೋಷಕರು ಮಕ್ಕಳ ಮೇಲೆ ಒತ್ತಡ ಹೇರುವ ಬದಲಾಗಿ ಪ್ರೋತ್ಸಾಹಿಸಬೇಕು. ಪ್ರೋತ್ಸಾಹವು ಮಕ್ಕಳಿಗೆ ಹುರುಪು ನೀಡುತ್ತದೆ. ಗುರಿಯೆಡೆಗಿನ ಪಯಣ ಸರಳವಾಗುತ್ತದೆ’ ಎಂದರು. ‘ಪ್ರಯತ್ನಕ್ಕೆ ಎಲ್ಲವೂ ಸಾಧ್ಯ’ಎಂದ ಅವರು, ‘ಎಸ್ಸೆಸ್ಸಲ್ಸಿಗಿಂತ ಪಿಯುಸಿಯಲ್ಲಿ ಹೆಚ್ಚಿನ ಅಂಕ ಗಳಿಸಬೇಕು. ಎನ್‌ಸಿಆರ್‌ಟಿ ಪಠ್ಯಕ್ರಮ, ಫೌಂಡೇಷನ್ ಕೋರ್ಸ್, ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು
ಗಮನ ಹರಿಸಿ’ಎಂದರು. ಅಪರಾಹ್ನ ಪೋಷಕರು ತಮ್ಮ ಮಕ್ಕಳ ಪ್ರಗತಿಯ ಕುರಿತು ಶಿಕ್ಷಕರುಗಳ ಜೊತೆ ಸಮಾಲೋಚನೆ ನಡೆಸಿದರು. ದೇಶದ ಬೇರೆ ಬೇರೆ ಭಾಗಗಳಿಂದ ಆಗಮಿಸಿದ್ದ 1450ಕ್ಕೂ ಅಧಿಕ ಪೋಷಕರುಗಳಿಗೆ ಸಂಸ್ಥೆಯ ವತಿಯಿಂದ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಆಳ್ವಾಸ್ ಪದವಿಪೂರ್ವಕಾಲೇಜಿನ ಪ್ರಾಂಶುಪಾಲ ಪ್ರೊ. ಮೊಹಮ್ಮದ್ ಸದಾಕತ್, ವಿವಿಧ ಸಂಯೋಜಕರುಗಳು ಇದ್ದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…