ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆ.ಎಸ್.ಆರ್.ಟಿ.ಸಿ ಸುಳ್ಯ ಕೊಯನಾಡು ಸರ್ವಿಸ್ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.

ಕಾರು ಜಖಂಗೊಂಡಿದ್ದು ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಮತ್ತು ಬಸ್ಸು ಸಂಪಾಜೆ ಕಡೆಯಿಂದ ಬರುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಇನ್ನು ಸುಳ್ಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.



