2022ರಲ್ಲಿ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ತಾಯಿ-ಮಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ನ್ಯಾಯಾಲಯ ತೀರ್ಪು ನೀಡಿದೆ.
ಅತ್ರಾಡಿ ಗ್ರಾಮದ ಮದಗ ಪ್ರದೇಶದ ನಿವಾಸಿ ಚೆಲುವಿ ಹಾಗೂ ಆಕೆಯ ಅಪ್ರಾಪ್ತ ವಯಸ್ಕ ಮಗಳು ಪ್ರಿಯಾ ಅವರ ಮೃತದೇಹಗಳು 2022ರ ಮೇ 9ರಂದು ಮನೆಯಲ್ಲಿ ಪತ್ತೆಯಾಗಿದ್ದವು. ಮೇ 8ರ ಸಂಜೆಯಿಂದ 9ರ ಬೆಳಗಿನ ನಡುವಿನ ಅವಧಿಯಲ್ಲಿ ಅಪರಾಧ ನಡೆದಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇಬ್ಬರನ್ನೂ ಕತ್ತು ಹಿಸುಕಿಕೊಂಡು ಕೊಲೆ ಮಾಡಿರುವುದು ದೃಢಪಟ್ಟಿರುವ ಹಿನ್ನಲೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಅಪರಾಧ ಪ್ರಕರಣ ದಾಖಲಾಗಿ, ತನಿಖೆಯನ್ನು ಅಂದಿನ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಅವರು ನಡೆಸಿ, ಭದ್ರಾವತಿ ತಾಲೂಕಿನ ಜನ್ನಾಪುರ ನಿವಾಸಿ ಹರೀಶ್ ಆರ್ ಯಾನೆ ಗಣೇಶ್ ಎಂಬತನನ್ನು ಬಂಧಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ರು. ಪ್ರಕರಣದ ವಿಚಾರಣೆ ನಡೆಸಿದ ಉಡುಪಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರು ಆರೋಪಿಗೆ ಜೀವಾವಧಿ ಶಿಕ್ಷೆಯ ಜೊತೆಗೆ 20,000 ದಂಡ ವಿಧಿಸಿದ್ದಾರೆ. ಈ ತೀರ್ಪಿನಿಂದ ನಾಲ್ಕು ವರ್ಷಗಳ ಕಾಲ ನಡೆದ ವಿಚಾರಣೆಗೆ ತೆರೆ ಬಿದ್ದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…