ಜನ ಮನದ ನಾಡಿ ಮಿಡಿತ

Advertisement

ಉಡುಪಿ: ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಪ್ರವಾಸಿ ಬಸ್ ಢಿ*ಕ್ಕಿ….!

ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಬೀಚ್ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ಹಂತದ ಬಿಕಾಂ ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ಪ್ರವಾಸಕ್ಕೆ ಹೊರಟಿದ್ದು, ಬಸ್ಸಿನಲ್ಲಿ 24 ವಿದ್ಯಾರ್ಥಿ, 23 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 50 ಮಂದಿ ಇದ್ದರು. ಇವರೆಲ್ಲ ಮುರುಡೇಶ್ವರಕ್ಕೆ ತೆರಳಿದ್ದು, ಅಲ್ಲಿಂದ ಉಡುಪಿ ಕಡೆ ಬಸ್ಸಿನಲ್ಲಿ ಬರುತ್ತಿದ್ರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು, ರಸ್ತೆ ಬದಿ ನಿಲ್ಲಿಸಿದ ಗ್ಯಾಸ್ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದೆ.

ಬಳಿಕ ಅಲ್ಲೇ ಮುಂದೆ ನಿಲ್ಲಿಸಿದ ಗೂಡ್ಸ್ ಲಾರಿಗೂ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಬಸ್ಸಿನ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಕ್ಲೀನರ್ ಮತ್ತು ಅಡುಗೆ ಸಹಾಯಕರೊಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ ಹಲವು ವಿದ್ಯಾರ್ಥಿಗಳು ಗಾಯಗೊಂಡು ಕುಂದಾಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!