ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಬೀಚ್ ಬಳಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ಹಂತದ ಬಿಕಾಂ ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ಪ್ರವಾಸಕ್ಕೆ ಹೊರಟಿದ್ದು, ಬಸ್ಸಿನಲ್ಲಿ 24 ವಿದ್ಯಾರ್ಥಿ, 23 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 50 ಮಂದಿ ಇದ್ದರು. ಇವರೆಲ್ಲ ಮುರುಡೇಶ್ವರಕ್ಕೆ ತೆರಳಿದ್ದು, ಅಲ್ಲಿಂದ ಉಡುಪಿ ಕಡೆ ಬಸ್ಸಿನಲ್ಲಿ ಬರುತ್ತಿದ್ರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು, ರಸ್ತೆ ಬದಿ ನಿಲ್ಲಿಸಿದ ಗ್ಯಾಸ್ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದೆ.
ಬಳಿಕ ಅಲ್ಲೇ ಮುಂದೆ ನಿಲ್ಲಿಸಿದ ಗೂಡ್ಸ್ ಲಾರಿಗೂ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಬಸ್ಸಿನ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಕ್ಲೀನರ್ ಮತ್ತು ಅಡುಗೆ ಸಹಾಯಕರೊಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ ಹಲವು ವಿದ್ಯಾರ್ಥಿಗಳು ಗಾಯಗೊಂಡು ಕುಂದಾಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…