ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಮೃತ್ತ್ಯು…!

 

ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ಪುತ್ತೂರು ನಿವಾಸಿ ವಿಶ್ವನಾಥ ರೈ ಅವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ವಿಶ್ವನಾಥ ಅವರು ಪಾಣೆಮಂಗಳೂರಿನ ನೆಹರು ನಗರದಲ್ಲಿರುವ ಸಾಗರ್ ಅಡಿಟೋರಿಯಂ ನಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಬಂದು ವಾಪಸು ಮನೆಗೆ ಹೋಗುವರಿದ್ದು, ರಸ್ತೆಯನ್ನು ದಾಟುತ್ತಿದ್ದ ವೇಳೆ ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಅತೀ ವೇಗದಿಂದ ಬಂದ ಕಾರೊಂದು ಡಿಕ್ಕಿಯಾಗಿದೆ. ಅಪಘಾತದಲ್ಲಿ ವಿಶ್ವನಾಥ ರೈ ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಇವರಿಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಆದರ್ಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರಿನಿಂದ  ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆ*0ಕಿ…!

ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ…!

ವಿಟ್ಲ: ಪೊಲೀಸರೊಂದಿಗೆ ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ಓರ್ವನ‌ ಬಂಧನ…!

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಬಿದ್ದ ಘಟನೆ…!

ಹುಣಸೂರು: “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ…!

ಮಂಗಳೂರು: ಮಾದಕ ದ್ರವ್ಯ ಕಳ್ಳಸಾಗಣೆ, ಸಹೋದರರ ಬಂಧನ….!

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪ*ತ್ತೆ….!

ಬಂಟ್ವಾಳ: ಅಡಿಕೆ ತೋಟಕ್ಕೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆ*ಂಕಿ….!

ಮಂಗಳೂರಿನ ಮಿನಿ ವಿಧಾನಸೌಧ ಎದುರು ಜಾತ್ಯತೀತ ಜನತಾದಳ ವತಿಯಿಂದ ಪ್ರತಿಭಟನಾ ಸಭೆ…!

error: Content is protected !!