ಜನ ಮನದ ನಾಡಿ ಮಿಡಿತ

Advertisement

ಹುಣಸೂರು: “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ…!

ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ:

 

ತಾಲ್ಲೂಕಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ: ವಿದ್ಯುನ್ಮಾನ ಮಾಹಿತಿ ಫಲಕ ಮತ್ತು ಆರೋಗ್ಯ ದಿನಚರಿಯ ಸಮರ್ಪಣಾ ಕಾರ್ಯಕ್ರಮವನ್ನು ಹುಣಸೂರಿನಲ್ಲಿ ಯಶಸ್ವಿಯಾಗಿ ನಡೆಸಲಾಯಿತು.

ಈ ಯೋಜನೆಯನ್ನು ಗ್ರಾಮ್ ಸಂಸ್ಥೆಯು ಹುಣಸೂರು ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸುತ್ತಿದ್ದು, ಕಾರ್ಯಕ್ರಮದಲ್ಲಿ ಸರಿ ಸುಮಾರು 400 ಮಂದಿ ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮುದಾಯ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಇನ್ನಿತರೆ ಗ್ರಾಮೀಣ ಪ್ರದೇಶದ ವ್ಯಕ್ತಿಗಳು ಭಾಗವಹಿಸಿ ಗ್ರಾಮೀಣ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಸಮುದಾಯದ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಬಗ್ಗೆ ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಆಯುಕ್ತಾಲಯದ ಉಪ ನಿರ್ದೇಶಕರಾದ ಶ್ರೀ ಕೃಷ್ಣಕುಮಾ‌ರ್, ಮೈಸೂರು ಜಿಲ್ಲೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಾಗರಾಜ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿ ಶ್ರೀ ಹೊಂಗಯ್ಯ, ಹುಣಸೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದರ್ಶನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಹರೀಶ್ ಹಾಗೂ ಗ್ರಾಮ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಬಸವರಾಜ್ ಆರ್. ಶ್ರೇಷ್ಠ ಸೇರಿದಂತೆ. ಪಿ ಡಿ ಓ, ಸಿ ಎಚ್ ಓ, ಪಿ ಎಚ್ ಸಿ ಓ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಕಾರ್ಯಕ್ರಮದ ಸಿಬ್ಬಂದಿಗಳು ಮತ್ತು ಒಕ್ಕೂಟದ ಪಧಾಧಿಕಾರಿಗಳು ಹಾಗೂ ಸಮುದಾಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!