ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ:
ತಾಲ್ಲೂಕಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗ್ರಾಮ್ (GRAAM) ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಸ್ವಾಸ್ಥ್ಯ ಸ್ವರಾಜ್ – ನಮ್ಮ ಆರೋಗ್ಯ, ನಮ್ಮ ಕ್ರಿಯಾಯೋಜನೆ ಅಭಿಯಾನ: ವಿದ್ಯುನ್ಮಾನ ಮಾಹಿತಿ ಫಲಕ ಮತ್ತು ಆರೋಗ್ಯ ದಿನಚರಿಯ ಸಮರ್ಪಣಾ ಕಾರ್ಯಕ್ರಮವನ್ನು ಹುಣಸೂರಿನಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಈ ಯೋಜನೆಯನ್ನು ಗ್ರಾಮ್ ಸಂಸ್ಥೆಯು ಹುಣಸೂರು ತಾಲ್ಲೂಕಿನಲ್ಲಿ ಅನುಷ್ಠಾನಗೊಳಿಸುತ್ತಿದ್ದು, ಕಾರ್ಯಕ್ರಮದಲ್ಲಿ ಸರಿ ಸುಮಾರು 400 ಮಂದಿ ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮುದಾಯ ಸ್ವ ಸಹಾಯ ಸಂಘಗಳ ಸದಸ್ಯರು ಹಾಗೂ ಇನ್ನಿತರೆ ಗ್ರಾಮೀಣ ಪ್ರದೇಶದ ವ್ಯಕ್ತಿಗಳು ಭಾಗವಹಿಸಿ ಗ್ರಾಮೀಣ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವುದು ಹಾಗೂ ಸಮುದಾಯದ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಬಗ್ಗೆ ಚರ್ಚಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಪಂಚಾಯತ್ ರಾಜ್ ಆಯುಕ್ತಾಲಯದ ಉಪ ನಿರ್ದೇಶಕರಾದ ಶ್ರೀ ಕೃಷ್ಣಕುಮಾರ್, ಮೈಸೂರು ಜಿಲ್ಲೆಯ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಾಗರಾಜ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹ ಅಧಿಕಾರಿ ಶ್ರೀ ಹೊಂಗಯ್ಯ, ಹುಣಸೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದರ್ಶನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀ ಹರೀಶ್ ಹಾಗೂ ಗ್ರಾಮ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ಬಸವರಾಜ್ ಆರ್. ಶ್ರೇಷ್ಠ ಸೇರಿದಂತೆ. ಪಿ ಡಿ ಓ, ಸಿ ಎಚ್ ಓ, ಪಿ ಎಚ್ ಸಿ ಓ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಂಜೀವಿನಿ ಕಾರ್ಯಕ್ರಮದ ಸಿಬ್ಬಂದಿಗಳು ಮತ್ತು ಒಕ್ಕೂಟದ ಪಧಾಧಿಕಾರಿಗಳು ಹಾಗೂ ಸಮುದಾಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…