ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಪೊಲೀಸರೊಂದಿಗೆ ಅನುಚಿತ ವರ್ತನೆ, ಕರ್ತವ್ಯಕ್ಕೆ ಅಡ್ಡಿ ಆರೋಪ – ಓರ್ವನ‌ ಬಂಧನ…!

 

ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ‌ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ ವಾಹನವನ್ನು ಚಲಾಯಿಸಿದ ಯುವಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕು ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26 ವ.) ಬಂಧಿತ ಆರೋಪಿ.ಮೇ.೩ರಂದು ಮಧ್ಯಾಹ್ನದ ವೇಳೆ ವಿಟ್ಲ ಠಾಣಾ ಎಸ್.ಐ. ಬಿ ಎಸ್ ನಾಯಕ್ ರವರು ಸಿಬ್ಬಂದಿಗಳೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿರುವಾಗ, ಅದೇ ದಾರಿಯಾಗಿ ಬಂದ ದ್ವಿಚಕ್ರ ವಾಹನದಲ್ಲಿ ಅದರ ಸವಾರ ಹೆಲ್ಮೇಟ್ ಧರಿಸದೇ ವಾಹನ ಚಲಾಯಿಸಿಕೊಂಡು ಬರುತ್ತಿರುವುದು ಕಂಡುಬಂದಿತ್ತು. ಕೂಡಲೇ ಆತನನ್ನು ತಡೆದು ನಿಲ್ಲಿಸಿ ವಿಚಾರಣೆ‌ ನಡೆಸಿದಾಗ ಆತ ಎಸ್.ಐ. ಬಿ.ಎಸ್.ನಾಯಕ್‌ರವರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಆತನ ವರ್ತನೆಯಿಂದ ಸಂಶಯಗೊಂಡ ಪೊಲೀಸರು ಆತ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಸಂಶಯಗೊಂಡು ಈ ಬಗ್ಗೆ ವಿಚಾರಿಸಿದಾಗ ಆತ ಅಮಲು ಪದಾರ್ಥ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದ. ಬಳಿಕ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತ ಮಾದಕವಸ್ತು ಸೇವನೆ ನಾಡಿರುವುದು ಧೃಢಪಟ್ಟಿತ್ತು. ಆರೋಪಿಯನ್ನು ಬಂಧಿಸಿರುವ ವಿಟ್ಲ ‌ಠಾಣಾ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!