ವಾಹನ ತಪಾಸಣೆ ಮಾಡುತ್ತಿದ್ದ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಲು ಪದಾರ್ಥ ಸೇವಿಸಿ ಧ್ವಿಚಕ್ರ ವಾಹನವನ್ನು ಚಲಾಯಿಸಿದ ಯುವಕನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ ತಾಲೂಕು ಕೊಳ್ನಾಡು ನಿವಾಸಿ ಮಹಮ್ಮದ್ ಅಸ್ಬೀರ್ (26 ವ.) ಬಂಧಿತ ಆರೋಪಿ.ಮೇ.೩ರಂದು ಮಧ್ಯಾಹ್ನದ ವೇಳೆ ವಿಟ್ಲ ಠಾಣಾ ಎಸ್.ಐ. ಬಿ ಎಸ್ ನಾಯಕ್ ರವರು ಸಿಬ್ಬಂದಿಗಳೊಂದಿಗೆ ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿರುವಾಗ, ಅದೇ ದಾರಿಯಾಗಿ ಬಂದ ದ್ವಿಚಕ್ರ ವಾಹನದಲ್ಲಿ ಅದರ ಸವಾರ ಹೆಲ್ಮೇಟ್ ಧರಿಸದೇ ವಾಹನ ಚಲಾಯಿಸಿಕೊಂಡು ಬರುತ್ತಿರುವುದು ಕಂಡುಬಂದಿತ್ತು. ಕೂಡಲೇ ಆತನನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದಾಗ ಆತ ಎಸ್.ಐ. ಬಿ.ಎಸ್.ನಾಯಕ್‌ರವರೊಂದಿಗೆ ಅನುಚಿತವಾಗಿ ವರ್ತಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ. ಆತನ ವರ್ತನೆಯಿಂದ ಸಂಶಯಗೊಂಡ ಪೊಲೀಸರು ಆತ ಅಮಲು ಪದಾರ್ಥ ಸೇವಿಸಿರುವ ಬಗ್ಗೆ ಸಂಶಯಗೊಂಡು ಈ ಬಗ್ಗೆ ವಿಚಾರಿಸಿದಾಗ ಆತ ಅಮಲು ಪದಾರ್ಥ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದ. ಬಳಿಕ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಆತ ಮಾದಕವಸ್ತು ಸೇವನೆ ನಾಡಿರುವುದು ಧೃಢಪಟ್ಟಿತ್ತು. ಆರೋಪಿಯನ್ನು ಬಂಧಿಸಿರುವ ವಿಟ್ಲ ಠಾಣಾ ಪೊಲೀಸ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…