ಜನ ಮನದ ನಾಡಿ ಮಿಡಿತ

Advertisement

ವಿಟ್ಲ: ಕಾರಿಗೆ ಬಸ್ಸು ಡಿಕ್ಕಿ – ಇಬ್ಬರಿಗೆ ಗಾಯ…!

 

 

ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ಮೇ.೫ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿ ನಡೆದಿದೆ.

 

ವಿಟ್ಲದ ಖಾಸಗಿ ಬಸ್ ನಿಲ್ದಾಣದ ಕಡೆಗೆ ಬರುತ್ತಿದ್ದ ‘ಫಲ್ಗುಣಿ’ ಹೆಸರಿನ ಖಾಸಗಿ ಬಸ್, ನಾಲ್ಕು ರಸ್ತೆಗಳ ಜಂಕ್ಷನ್ ದಾಟಿದ ತಕ್ಷಣವೇ ತನ್ನ ಮುಂಭಾಗದಲ್ಲಿದ್ದ ಹುಂಡೈ ಕಾರಿಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಬಸ್ಸಿನ ಮುಂಭಾಗದಲ್ಲಿ ಸಿಲುಕಿಕೊಂಡಿದ್ದು, ಬಸ್ಸು ಕಾರನ್ನು ಸುಮಾರು 50 ಅಡಿಗಳಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಮತ್ತು ಬಾಲಕ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿತ್ತು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!