ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಹೊತ್ತಿ ಉರಿದ ಭೀಕರ ಘಟನೆ ಹಾವೇರಿಯಲ್ಲಿ ನಡೆದಿದೆ.
ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ಸಿನಲ್ಲಿದ್ದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಪಲ್ಲಕ್ಕಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಾಗ ದೇವರಗುಡ್ಡದ ಬಳಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಚಾಲಕನ ಈ ಸಮಯಪ್ರಜ್ಞೆಯಿಂದಾಗಿ ಭಾರಿ ದುರಂತವೊಂದು ತಪ್ಪಿದೆ. ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಧಗಧಗನೆ ಉರಿದಿದೆ. ಸಾರಿಗೆ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರಾದರೂ ಪ್ರಯೋಜನವಾಗಲಿಲ್ಲ. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…