ಅಪಘಾತ

ಸುಬ್ರಹ್ಮಣ್ಯ: ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಭೀಕರ ರಸ್ತೆ ಅಪಘಾತ…!

 

ಸುಬ್ರಹ್ಮಣ್ಯ- ಮಂಜೇಶ್ವರ ಹೆದ್ದಾರಿಯ ಸವಣೂರು ಸಮೀಪದ ಚಾಪಳ್ಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹ ಸವಾರ ಪುತ್ತೂರು ಆಸ್ಪತ್ರೆಗೆ ಕರೆತರುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹಾಗೆಯೇ ಇನ್ನೊಂದು ಬೈಕ್ ನಲ್ಲಿ ಹಿಂಬದಿಯಿಂದ ಬರುತ್ತಿದ್ದವರಿಗೂ ಕೂಡ ಗಾಯಗಳಾಗಿವೆ ಎಂದು ಮಾಹಿತಿ ಲಭಿಸಿದೆ. ಬಂಟ್ವಾಳ ತಾಲೂಕಿನ ಮಿತ್ತೂರು ಬೊಳ್ಳರಮಜಲು ನಿವಾಸಿ ಪುರಂದರ ಎಂಬವರ ದ್ವಿತೀಯ ಪುತ್ರ ಯಜ್ನೇಶ್ ಹಾಗೂ ಆರ್ಲಪದವು ನೋಣಯ್ಯ ಭರಣ್ಯ ಎಂಬವರ ಪುತ್ರ ಜಗನ್ ಮೃತಪಟ್ಟ ಯುವಕರು. ಜಗನ್ ಪುತ್ತೂರಿನ ಅಕ್ಷಯ ಕಾಲೇಜಿನ ಅಂತಿಮ ಪದವಿ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯಾಗಿದ್ದಾನೆ. ಇತ್ತೀಚೆಗೆ ಇಂಟರ್ನ್ ಶಿಪ್ ಗೆ ಆಸ್ಟ್ರೇಲಿಯಾಗೆ ತೆರಳಿ ಕೆಲದಿನಗಳ ಹಿಂದೆ ತವರಿಗೆ ಆಗಮಿಸಿದ್ದರು. ಈ ಇಬ್ಬರು ಯುವಕರು ಕಡಬ ತಾಲೂಕಿನ ಆಲಂಗಾರಿಗೆ ಕೆಲಸದ ನಿಮಿತ್ತ ತೆರಳಿದ್ದರು. ಇಂದು ಸಂಜೆ 5 ಗಂಟೆ ಸುಮಾರಿಗೆ ವಾಪಸ್ಸು ಮನೆಗೆ ಮರಳುತ್ತಿದ್ದಾಗ, ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬಂದ ಮುಗೆರೋಡಿ ಕನ್ಸೆಕ್ಷನ್‍ಗೆ ಸೇರಿದ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಲಂಕಾರಿನಲ್ಲಿ ನಡೆಯುತ್ತಿದ್ದ ಕಾಮಗಾರಿಗೆ ಸವಣೂರು ಕಡೆಯಿಂದ ನೀರು ಪೂರೈಸುತ್ತಿದ್ದ ಟ್ಯಾಂಕರ್ ಚಾಲಕ, ಸ್ಕೂಟರ್‍ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ವಾಹನವನ್ನು ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆಯೆ ಬೈಕ್ ಟ್ಯಾಂಕರ್‍ನ ಚಕ್ರದ ಅಡಿಗೆ ಸಿಲುಕಿದ ಪರಿಣಾಮ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಸಂದರ್ಭದಲ್ಲೇ ನಿಯಂತ್ರಣ ತಪ್ಪಿದ ಟ್ಯಾಂಕರ್ 90 ಡಿಗ್ರಿ ತಿರುಗಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ. ಅದೇ ಹಾದಿಯಲ್ಲಿ ಬರುತ್ತಿದ್ದ ಮತ್ತೊಂದು ಬೈಕ್ ಸವಾರರು ಅಪಘಾತವನ್ನು ಕಂಡು ಗಾಬರಿಯಿಂದ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿದೆ. ಈ ಘಟನೆಯಲ್ಲಿ ಬೈಕ್‍ನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದಿಂದಾಗಿ ಸ್ಥಳದಲ್ಲಿ ವಾಹನ ಸಂಚಾರವನ್ನು ವ್ಯತ್ಯಯ ಉಂಟಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ಳಾರೆ ಪೆÇಲೀಸರು ಭೇಟಿ ನೀಡಿ, ಮೊಕದ್ದಮೆ ದಾಖಲಾಗಿದೆ. ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ಮನೆಯವರಿಗೆ ಮೃತದೇಹವನ್ನ ಬಿಟ್ಟುಕೊಡಲಾಗಿದೆ. ಆಸ್ಪತ್ರೆ ಬಳಿ ಮೃತರ ಕುಟುಂಬಸ್ಥರ ಆಕಂದ್ರಣ ಮುಗಿಲು ಮುಟ್ಟಿತ್ತು. ಅಲ್ಲದೇ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

21 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

21 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

22 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

22 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

22 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

6 days ago