ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ.
ಕುಡಿದ ಮತ್ತಿನಲ್ಲಿದ್ದ ಯುವಕನು ರಾಜಕಾಲುವೆಯ ಸುರಕ್ಷತಾ ಗ್ರಿಲ್ ಮೇಲೆ ಹತ್ತಿ, ತಾನು ಕೆಳಕ್ಕೆ ಬಿದ್ದು ಸಾಯುವುದಾಗಿ ಕೂಗಾಡಿದ್ದು, ಯುವಕನ ಈ ಹೈಡ್ರಾಮಾದಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ಯುವಕನ ಅಪಾಯಕಾರಿ ನಡವಳಿಕೆಯನ್ನು ಗಮನಿಸಿದ ಸ್ಥಳೀಯರು ಯುವಕನನ್ನು ಸಮಾಧಾನಪಡಿಸಿ, ಆತನನ್ನು ಗ್ರಿಲ್‌ನಿಂದ ಸುರಕ್ಷಿತವಾಗಿ ಕೆಳಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯರು ಯುವಕನನ್ನು ಹಿಡಿದು ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದು, ಯುವಕನ ಈ ರೀತಿ ವರ್ತಿಸಲು ಕಾರಣವೇನು ಎಂಬುದರ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…