ಜನ ಮನದ ನಾಡಿ ಮಿಡಿತ

Advertisement

ಚಿಕ್ಕೋಡಿ : ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಮೃತ್ತ್ಯು…!

 

ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ ನಿವಾಸಿ, ಸಾನ್ವಿ ಕಾಂಬಳೆ ಮೃತಪಟ್ಟ ವಿದ್ಯಾರ್ಥಿ.

ಸಂಜೆ ವೇಳೆ ಮನೆಯ ಮೇಲ್ಮಾವಣಿಯ ಮೇಲೆ ಸ್ಕಿಪಿಂಗ್ ಆಟವಾಡುತ್ತಿದ್ದಳು. ಆಟದ ಭರದಲ್ಲಿ ಸ್ಕಿಪಿಂಗ್ ಹಗ್ಗವು ಮನೆಯ ಮೇಲಿನ ಹಾದುಹೋಗಿದ್ದ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಬಾಲಕಿ ತಂತಿ ಮೇಲೆ ಬಿದ್ದ ಹಗ್ಗವನ್ನು ತೆಗೆಯಲು ಪ್ರಯತ್ನಿಸಿದ್ದಾಳೆ. ಆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ ಕಾರಣ ಬಾಲಕಿ ಮನೆಯ ಮೇಲಿಂದ ಕೆಳಗೆ ಬಿದ್ದಿದ್ದಾಳೆ. ಇದರಿಂದ ಗಾಬರಿಗೊಂಡ ಪೋಷಕರು ಆಕೆಯನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಸಾನ್ವಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಮನೆಯ ಮೇಲಿನ ವಿದ್ಯುತ್ ತಂತಿಗಳು ಎಷ್ಟೊಂದು ಅಪಾಯಕಾರಿ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!