ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ.
ಯಾಪಲದಿನ್ನಿ ಗ್ರಾಮದ ಈಶಪ್ಪ ಕೊಲೆಯಾದ ದುರ್ದೈವಿ. ಘಟನೆ ನಡೆದ ರಾತ್ರಿ ಈಶಪ್ಪ ತಮ್ಮ ಮನೆಯ ಮಾಳಿಗೆಯ ಮೇಲೆ ಮಲಗಿದ್ದರು. ಈ ವೇಳೆ ಅನ್ಯ ಧರ್ಮದ ಯುವಕ ಅಸ್ಲಂ ಮತ್ತು ಆತನ ಸ್ನೇಹಿತರು ಸೇರಿ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿರುವುದನ್ನು ಈಶಪ್ಪ ಗಮನಿಸಿದ್ದಾರೆ. ಅನ್ಯಕೋಮಿನ ಯುವಕರು ಕರೆದೊಯ್ಯುತ್ತಿರುವ ಅಪ್ರಾಪ್ತ ತನ್ನ ಸ್ನೇಹಿತ ಆಂಜನೇಯನ ತಮ್ಮನ ಮಗಳಾಗಿದ್ದರಿಂದ, ಈಶಪ್ಪ ತಕ್ಷಣ ಮಾಳಿಗೆಯಿಂದ ಕೆಳಗಿಳಿದು ಬಂದು ಯುವಕರನ್ನು ತಡೆದು, ‘ಬಾಲಕಿಯನ್ನು ಎಲ್ಲಿಗೆ ಕರೆದೊಯ್ಯುತ್ತಿದ್ದೀರಿ?’ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ತಮ್ಮ ಕೃತ್ಯಕ್ಕೆ ಅಡ್ಡಿಯಾದ ಈಶಪ್ಪನ ಮೇಲೆ ಆಕ್ರೋಶಗೊಂಡ ಅಸ್ಲಂ ಮತ್ತು ಆತನ ಗ್ಯಾಂಗ್, ಹಗ್ಗ ಅಥವಾ ವೈರ್‌ನಿಂದ ಈಶಪ್ಪನ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…