ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಅವರೊಂದಿಗೆ ಪಕ್ಷದ ಒಂಭತ್ತು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಟಿವಿಕೆ ಸರ್ಕಾರ ಅಧಿಕೃತವಾಗಿ ಅಧಿಕಾರಕ್ಕೆ ಬಂದಿದೆ.
ರಾಜಭವನದ ವತಿಯಿಂದ ನಡೆದ ಸಮಾರಂಭದಲ್ಲಿ ರಾಜ್ಯಪಾಲರು ಮುಖ್ಯಮಂತ್ರಿ ವಿಜಯ್ ಹಾಗೂ ನೂತನ ಸಚಿವರಿಗೆ ಹುದ್ದೆ ಮತ್ತು ಗೌಪ್ಯತಾ ಪ್ರಮಾಣವಚನ ಬೋಧಿಸಿದರು. ಸಮಾರಂಭಕ್ಕೆ ರಾಜಕೀಯ ನಾಯಕರು, ಸಿನಿರಂಗದ ಗಣ್ಯರು ಹಾಗೂ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ನೂತನ ಸಚಿವ ಸಂಪುಟದಲ್ಲಿ ಎನ್. ಆನಂದ್, ಅಧವ ಅರ್ಜುನ, ಡಾ. ಕೆ.ಜಿ. ಅರುಣರಾಜ್, ಕೆ.ಎ. ಸೆಂಗೊಟ್ಟೆಯನ್, ಪಿ. ವೆಂಕಟರಮಣನ್, ಆರ್. ನಿರ್ಮಲ ಕುಮಾರ್, ರಾಜಮೋಹನ್, ಟಿ.ಕೆ. ಪ್ರಭು ಹಾಗೂ ಎಸ್. ಕೀರ್ತನಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸಚಿವರಿಗೆ ಖಾತೆಗಳ ಹಂಚಿಕೆಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ. ಟಿವಿಕೆ ಸರ್ಕಾರದ ಮೊದಲ ಸಚಿವ ಸಂಪುಟವು ಹಿರಿಯರ ಅನುಭವ, ಯುವಶಕ್ತಿ, ತಂತ್ರಜ್ಞರ ನಿಷ್ಠೆ ಹಾಗೂ ವೃತ್ತಿಪರ ಸಾಮರ್ಥ್ಯದ ಸಮನ್ವಯವನ್ನು ಒಳಗೊಂಡಿದೆ. ಆಡಳಿತದಲ್ಲಿ ಹೊಸ ಚಿಂತನೆಗಳನ್ನು ಪರಿಚಯಿಸುವ ಜೊತೆಗೆ ನಿರಂತರತೆಯನ್ನು ಕಾಪಾಡುವ ಉದ್ದೇಶವನ್ನು ಈ ತಂಡ ಪ್ರತಿಬಿಂಬಿಸುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿರುವ ಟಿವಿಕೆ ಸರ್ಕಾರದ ಮೇಲೆ ಜನರಲ್ಲಿ ಭಾರೀ ನಿರೀಕ್ಷೆ ಮೂಡಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…