ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟು ಸಹ ಸವಾರೆ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ನಿವಾಸಿ ಸದಾನಂದ ಆಚಾರ್ಯ ಎಂದು ಗುರುತಿಸಲಾಗಿದೆ. ಇವರು ಅರಸಿನಮಕ್ಕಿಯ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉದ್ಯೋಗಿಯಾಗಿದ್ದರು. ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಅವರ ಪತ್ನಿ ಉಷಾ ಅವರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ಅರಸಿನಮಕ್ಕಿಯಿಂದ ಕೊಕ್ಕಡ ಮಾರ್ಗವಾಗಿ ಉಪ್ಪಿನಂಗಡಿಗೆ ಪ್ರಯಾಣಿಸುತ್ತಿದ್ದರು. ಗೋಳಿತ್ತೊಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಗೆ ಇವರು ಪ್ರವೇಶಿಸುತ್ತಿದ್ದಂತೆಯೇ, ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಚಲಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸದಾನಂದ ಆಚಾರ್ಯ ಅವರು ಘಟನಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…