ಹಾವೇರಿಯ ಕಬ್ಬೂರು ಗ್ರಾಮದಲ್ಲಿ ಕ್ಷುಲ್ಲಕ ವಿಚಾರಕ್ಕೆ ಜಗಳ ನಡೆದು ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಕುಡಿದ ಮತ್ತಿನಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ.ಹಾವೇರಿಯ ಕಬ್ಬೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.ನಿಂಗಪ್ಪ ಚನ್ನಬಸಪ್ಪ ಕರಿಗಾರ್ (40) ಕೊಲೆಯಾದ ದುರ್ದೈವಿ.
ಶಿವು ನಿಂಗಪ್ಪ ಪಟ್ಟೇದ ಎಂಬಾತ ಈ ಭೀಕರ ಕೃತ್ಯದಲ್ಲಿ ಆರೋಪಿ. ಮೃತ ನಿಂಗಪ್ಪ-ಆರೋಪಿ ಶಿವು ಮನೆಗಳು ಅಕ್ಕಪಕ್ಕದಲ್ಲಿವೆ.
ಇಬ್ಬರಿಗೂ ಕುಡಿತದ ಚಟವಿತ್ತು. ಹಳೆಯ ವೈಷಮ್ಯವೇ ಕೊಲೆಗೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಸುಮಾರು ಒಂದು ತಿಂಗಳ ಹಿಂದೆ ಇಬ್ಬರ ನಡುವೆ ಜಗಳ ಆಗಿತ್ತು. ಈಮೊದಲೇ ಒಂದು ಬಾರಿ ತಲೆಗೆ ಗಾಯಗಳಾಗುವಂತೆ ಆರೋಪಿ ಶಿವು ಹೊಡೆದಿದ್ದ ಎನ್ನಲಾಗಿದೆ. ಗ್ರಾಮದ ಹಿರಿಯರು ಸೇರಿ ಇಬ್ಬರ ನಡುವೆ ರಾಜಿ ಮಾಡಿಸಿದ್ದರೂ ಸಹ ಶಾಂತಿ ಉಳಿಯಲಿಲ್ಲ.ಇಂದು ಬೆಳಿಗ್ಗೆ ಮತ್ತೆ ಏಕಾಏಕಿ ಹಲ್ಲೆ ಶಿವು ಹಲ್ಲೆ ಮಾಡಿದ. ತಲೆಗೆ ಬಲವಾಗಿ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ನಿಂಗಪ್ಪ ಸಾವನ್ನಪ್ಪಿದ. “ನಾನೇ ಕೊಲೆ ಮಾಡಿದ್ದೇನೆ” ಎಂದು ಪೊಲೀಸರ ಮುಂದೆ ಆರೋಪಿ ಶಿವು ಶರಣಾಗಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…