ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನೇತ್ರಾವತಿ ನೀರಿನ ಮಟ್ಟ ಕುಸಿತ; ದ.ಕ ಜಿಲ್ಲೆಯಲ್ಲಿ ಆತಂಕ…!

 

ದ.ಕ.ಜಿಲ್ಲೆಯ ಜೀವನಾಡಿಯಾಗಿರುವ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಗಣನೀಯವಾಗಿ ಇಳಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಬಿಸಿಲಿನ ತಾಪ ಇನ್ನಷ್ಟು ಹೆಚ್ಚಳವಾದರೆ ನೀರಿನ ಮಟ್ಟ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಗಳಿವೆ.

ಬಂಟ್ವಾಳ ಜಕ್ರಿಬೆಟ್ಟು ಡ್ಯಾಂ ನ ಕೆಳಭಾಗದಿಂದ ಪಾಣೆಮಂಗಳೂರು ನೂತನ ಸೇತುವೆವರೆಗೆ ನದಿಯಲ್ಲಿ ನೀರಿಲ್ಲದೆ ಬತ್ತಿಹೋಗಿದ್ದು, ಮರಳು ಮತ್ತು ಕಲ್ಲುಗಳು ಎದ್ದು ಕಾಣುತ್ತಿವೆ. ಬಂಟ್ವಾಳ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ಅಭಾವ ತಲೆತೊರದಿದ್ದರೂ, ಕುಡಿಯುವ ನೀರು ಪೂರೈಕೆ ಮತ್ತು ಬಳಕೆಯ ಬಗ್ಗೆ ಅಧಿಕಾರಿಗಳು ಜಾಗೃತೆವಹಿಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳೂರು ನಗರಕ್ಕೆ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವನ್ನು ಜಿಲ್ಲಾಧಿಕಾರಿ ಅವರು ವಹಿಸಿ, ಅದೇಶವೊಂದನ್ನು ಹೊರಡಿಸಿದ್ದಾರೆ. ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು , ಇತರೆ ಉದ್ದೇಶಗಳಿಗಾಗಿ ಬಳಸದಂತೆಯೂ ಸೂಚನೆ ನೀಡಿದ್ದಾರೆ. ಅಲ್ಲದೆ ಎ.ಎಂ.ಆರ್.ಡ್ಯಾಮ್ ನಿಂದ ತುಂಬೆ ಡ್ಯಾಂ ಗೆ ನೀರು ಬಿಡುಗಡೆಗೊಳಿಸುವಂತೆ ಸೂಚಿಸಿದ್ದಾರೆ. ಮಂಗಳೂರು ನಗರದ ಕುಡಿಯುವ ನೀರಿನ ನಿರ್ವಹಣೆ: ಜಿಲ್ಲಾಧಿಕಾರಿಗಳ ಕಚೇರಿಯಿಂದ ಮಹತ್ವದ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!