ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬೋಸರಾಜು-ರಮಾನಾಥ ರೈ ಭೇಟಿ; ನೀರಾವರಿ ಯೋಜನೆಗಳ ಅನುದಾನಕ್ಕೆ ಮನವಿ…!

 

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಕಳ್ಳಿಗೆ ಸ್ವಗೃಹಕ್ಕೆ ಭೇಟಿ ನೀಡಿದ್ದಾರೆ.

ಸುಮಾರು ಒಂದು ತಾಸುಗಳ ಕಾಲ ಮಾಜಿ ಸಚಿವ ರೈ ಅವರ ಜೊತೆ ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಿದ ಅವರು ಪಕ್ಷ ಸಂಘಟನೆಯ ದೃಷ್ಟಿಯಿಂದ ರೈ ಅವರು ಕೈಗೊಂಡ ಕೆಲವು ಹೋರಾಟಗಳು ಯಶಸ್ಸು ತಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪಶ್ಚಿಮ ವಾಹಿನಿ ಯೋಜನೆ ಕುರಿತು ಸಚಿವರ ಜೊತೆ ಚರ್ಚಿಸಿದ ಅವರು ದ.ಕ.ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ಅನುದಾನವನ್ನು ಒದಗಿಸುವಂತೆ ಮನವಿ ಮಾಡಿದ್ದಾರೆ. ಇದರ ಜೊತೆ ಸಜೀಪದಲ್ಲಿ ನಿರ್ಮಾಣ ಹಂತದಲ್ಲಿರುವ ಬಹು ಗ್ರಾಮ ಕುಡಿಯುವ ನೀರು ಹಾಗೂ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ ಅನುದಾನದ ಅಗತ್ಯವಿದ್ದು ವಿಶೇಷ ಮುತುವರ್ಜಿಯಿಂದ ಒದಗಿಸಿಕೊಡುವಂತೆ ಅವರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಜಿ.ಪಂ.ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ ತುಂಬೆ ಹಾಗೂ ಇತರ ಕಾಂಗ್ರೇಸ್ ನಾಯಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!