ಜನ ಮನದ ನಾಡಿ ಮಿಡಿತ

Advertisement

ಚೆನ್ನೈ : ಶಾಲೆ-ಧಾರ್ಮಿಕ ಕೇಂದ್ರಗಳ ಬಳಿ ಮದ್ಯದಂಗಡಿ ಬಂದ್…!

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜೋಸೆಫ್ ವಿಜಯ್ ಅವರು ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಂಡಿದ್ದಾರೆ.

ತಮ್ಮ ಮೊದಲ ಆದೇಶದಲ್ಲೇ ರಾಜ್ಯದ ಶಾಲಾ-ಕಾಲೇಜುಗಳು ಹಾಗೂ ಧಾರ್ಮಿಕ ಕೇಂದ್ರಗಳ ಸಮೀಪ ಕಾರ್ಯನಿರ್ವಹಿಸುತ್ತಿರುವ 717 ಸರ್ಕಾರಿ ಮದ್ಯದಂಗಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದೇವಸ್ಥಾನ, ಮಸೀದಿ, ಚರ್ಚ್ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಹಾಗೂ ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯೊಳಗಿನ ಮದ್ಯದಂಗಡಿಗಳನ್ನು ಮುಂದಿನ ಎರಡು ವಾರಗಳೊಳಗೆ ತೆರವುಗೊಳಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ. ರಾಜ್ಯದಲ್ಲಿರುವ ಒಟ್ಟು 4,765 ಸರಕಾರಿ ಮದ್ಯದಂಗಡಿಗಳ ಪೈಕಿ 717 ಅಂಗಡಿಗಳಿಗೆ ಈ ಆದೇಶದಿಂದ ಬೀಗ ಬೀಳಲಿದ್ದು, ಸರ್ಕಾರದ ಈ ಕ್ರಮ ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಮದ್ಯದಂಗಡಿಗಳ ಬಂದ್ ಕ್ರಮದ ಜೊತೆಗೆ, ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಹಲವು ಪ್ರಮುಖ ಭರವಸೆಗಳ ಜಾರಿಗೂ ಸಿಎಂ ವಿಜಯ್ ಚಾಲನೆ ನೀಡಿದ್ದಾರೆ. ಗೃಹ ಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ ವಿಶೇಷ ಪಡೆ ರಚನೆಗೆ ಆದೇಶ ಹೊರಡಿಸಲಾಗಿದೆ. ಜೊತೆಗೆ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಡ್ರಗ್ಸ್ ವಿರೋಧಿ ವಿಶೇಷ ಘಟಕ ಸ್ಥಾಪನೆಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಟಿವಿಕೆ ಪಕ್ಷದ ಮೂಲಕ ರಾಜ್ಯದ ಅತಿದೊಡ್ಡ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿರುವ 51 ವರ್ಷದ ವಿಜಯ್, ಕಾಂಗ್ರೆಸ್, ಎಡಪಕ್ಷಗಳು, ವಿಸಿಕೆ ಹಾಗೂ ಮುಸ್ಲಿಂ ಲೀಗ್ ಬೆಂಬಲದೊ0ದಿಗೆ ತಮಿಳುನಾಡಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸಮ್ಮಿಶ್ರ ಸರ್ಕಾರ ರಚಿಸಿರುವುದು ವಿಶೇಷವಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!