ಎನ್‌ಆರ್‌ಜೆ ಕರ್ನಾಟಕ ಸೀನಿಯರ್ ಸ್ಟೇಟ್ ಲೆವೆಲ್ ಸ್ವಿಮ್ಮಿಂಗ್ ಮೀಟ್ – 2026ರಲ್ಲಿ ಈಜುಗಾರ ಚಿಂತನ್ ಎಸ್ ಶೆಟ್ಟಿ ಅತ್ಯುತ್ತಮ ಸಾಧನೆ ಮಾಡಿದ್ದು, ಎರಡು ಚಿನ್ನ, ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಗೆದ್ದು ರಾಜ್ಯದ ಗಮನ ಸೆಳೆದಿದ್ದಾರೆ.
ಚಿಂತನ್ ಶೆಟ್ಟಿ ಅವರು 50 ಮೀ. ಮತ್ತು 100 ಮೀ. ಬಟರ್‌ಫ್ಲೈ ವಿಭಾಗದಲ್ಲಿ ಚಿನ್ನದ ಪದಕ, 200 ಮೀ. ಇಂಡಿವಿಜುವಲ್ ಮೆಡ್ಲೆಯಲ್ಲಿ ಬೆಳ್ಳಿ ಪದಕ ಹಾಗೂ 100 ಮೀ. ಫ್ರೀಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ ಪಡೆದಿದ್ದಾರೆ.ಈ ಸಾಧನೆಯ ಹಿನ್ನೆಲೆಯಲ್ಲಿ ಅವರು ಕರ್ನಾಟಕವನ್ನು ಪ್ರತಿನಿಧಿಸಲು ನಡೆಯಲಿರುವ 79ನೇ ಸೀನಿಯರ್ ನ್ಯಾಷನಲ್ ಅಕ್ವಾಟಿಕ್ ಚಾಂಪಿಯನ್‌ಶಿಪ್ – 2026ಕ್ಕೆ ಆಯ್ಕೆಯಾಗಿದ್ದಾರೆ. ಈ ರಾಷ್ಟ್ರೀಯ ಮಟ್ಟದ ಸ್ಪರ್ಧೆ ಜೂನ್ 16ರಿಂದ ಗುಜರಾತ್‌ನ ಅಹಮದಾಬಾದ್‌ನ ವೀರ್ ಸಾವರ್ಕರ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.ಪ್ರಸ್ತುತ ಚಿಂತನ್ ಅವರು ಬೆಂಗಳೂರಿನ ಲಕ್ಷ್ಯಾನ್ ಅಕಾಡೆಮಿ ಆಫ್ ಸ್ಪೋರ್ಟ್ಸ್‌ನಲ್ಲಿ ತರಬೇತಿ ಪಡೆಯುತ್ತಿದ್ದು, ಮಂಗಳೂರಿನ ಶ್ರೀ ರಾಮಕೃಷ್ಣ ಕಾಲೇಜು ಬಂಟ್ಸ್ ಹಾಸ್ಟೆಲ್‌ನ ವಿದ್ಯಾರ್ಥಿಯಾಗಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…