ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ ಕುಕ್ಕಾಜೆ ಎಂಬಲ್ಲಿ ನಡೆದಿದೆ.
ಕುರಿಯಾಳ ಗ್ರಾಮದ ಕುಕ್ಕಾಜೆ ಕೇಶವ ಪೂಜಾರಿ ಎಂಬವರ ಬಾವಿಯ ಹೂಳೆತ್ತುವುದಕ್ಕೆ ಬಂದ ಬರಿಮಾರು ನಿವಾಸಿಗಳಾದ ಪದ್ಮನಾಭ ಮತ್ತು ರಾಮ ಎಂಬವರು ಬಾವಿಗೆ ಬಿದ್ದಿದ್ದು, ಅದರಲ್ಲಿ ಒರ್ವರ ಕಾಲಿಗೆ ಗಾಯವಾಗಿದೆ.
ಇವರು ಬಾವಿಯ ಹೂಳೆತ್ತುವ ಕೆಲಸ ಮುಗಿಸಿ, ವಾಪಸು ಬಾವಿಯೊಳಗಿನಿಂದ ಮೇಲೆ ಹಗ್ಗ ಹಿಡಿದು ಮೇಲೆಕ್ಕೆ ಬರುತ್ತಿದ್ದ ವೇಳೆ ಹಗ್ಗ ಕಡಿದು ಬಿದ್ದಿದ್ದಾರೆ. ಸುಮಾರು 40 ಅಡಿ ಆಳದ ಬಾವಿ ಇದಾಗಿದ್ದು, ಅರ್ಧಕ್ಕೆ ಬರುತ್ತಿದ್ದಂತೆ ಹಗ್ಗ ಕಡಿದಿದೆ. ಬಾವಿಯೊಳಗೆ ಬಿದ್ದ ಇಬ್ಬರಲ್ಲಿ ಒಬ್ಬರ ಕಾಲಿಗೆ ಸಣ್ಣಪುಟ್ಟ ಗಾಯವಾಗಿದ್ದು ಇನ್ನೊಬ್ಬರು ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಹಗ್ಗ ಕಡಿದು ಬಾವಿಯೊಳಗೆ ಬಿದ್ದ ಇವರನ್ನು ಸುರಕ್ಷಿತವಾಗಿ ಮೇಲೆತ್ತುವ ಕಾರ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ನಡೆದಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…