ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ.

ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಮೆಲ್ಕಾರ್ ಎಂಬಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗುಜಿರಿ ಸಾಮಾಗ್ರಿಗಳ ಸಾಗಾಟದ ಲಾರಿ ಇದಾಗಿದ್ದು, ಲಾರಿಯಲ್ಲಿ ತುಂಬಿಸಿದ್ದ ಗುಜರಿ ಸಾಮಾಗ್ರಿಗಳು ಬೆಂಕಿಗೆ ಆಹುತಿಯಾಗಿದೆ.

ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಗುಜಿರಿಯಲ್ಲಿದ್ದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.



