ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ…!

ನೇತ್ರಾವತಿ ನದಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟ ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಗೂಡಿನ ಬಳಿ ನಿವಾಸಿ ಮಹಮ್ಮದ್ ಎಂಬವರ ಪುತ್ರ ಇರ್ಫಾನ್ (36) ಅವರ ಮೃತದೇಹ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಪಾಣೆಮಂಗಳೂರು ನೂತನ ಸೇತುವೆ ಕೆಳಭಾಗದಲ್ಲಿ ಸಿಕ್ಕಿದೆ.
ಬಂಟ್ವಾಳ ಪುರಸಭೆಯ ಪೌರಕಾರ್ಮಿಕರು ತ್ಯಾಜ್ಯ ನಿರ್ವಹಣೆ ಕಾರ್ಯ ಮಾಡುತ್ತಿದ್ದ ವೇಳೆ ಮೃತದೇಹ ನದಿಯಲ್ಲಿ ಕಂಡು ಬಂದಿದ್ದು, ಬಂಟ್ವಾಳ ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಂಟ್ವಾಳ ಪೋಲೀಸರು ಹಾಗೂ ಗೂಡಿನ‌ಬಳಿಯ ಸ್ಥಳೀಯರು ಮೃತದೇಹವನ್ನು ಮೇಲಕ್ಕೆತ್ತಿ, ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ಕಾರಣಕ್ಕಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದ ಶೀತಲೀಕರಣದಲ್ಲಿ ಇಡಲಾಗಿತ್ತು.
ಸಂಜೆ ವೇಳೆ ಮೃತದೇಹದ ಗುರುತು ಪತ್ತೆಯಾಗಿದ್ದು, ಗೂಡಿನ ಬಳಿ ನಿವಾಸಿ ಇರ್ಫಾನ್ ಎಂದು ಹೇಳಲಾಗಿದೆ. ಕಳೆದ ಮೂರು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಈತ ಮೂರು ವರ್ಷಗಳ ಹಿಂದೆಯಷ್ಟೆ ಊರಿಗೆ ಮರಳಿ ಬಳಿಕ ಸ್ವಂತ ರಿಕ್ಷಾ ಖರೀದಿಸಿ ಅದರಲ್ಲಿ ದುಡಿಯುತ್ರಿದ್ದ. ವಿವಾಹಿತನಾಗಿರುವ ಈತನಿಗೆ ಮೂವರು ಮಕ್ಕಳಿದ್ದಾರೆ. ಆದರೆ ಮೂರು ದಿನಗಳಿಂದ ಈತ ಕಾಣೆಯಾಗಿದ್ದ ಎಂದು ಹೇಳಲಾಗಿದ್ದು, ಇಂದು ಬೆಳಿಗ್ಗೆ ಈತನ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಮೃತದೇಹದ ಕೈ ಗಳಲ್ಲಿ ಗಾಯಗಳಿರುವುದರಿಂದ ಸಾವಿನಲ್ಲಿ ಸಂಶಯವಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಅಲ್ಲದೆ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ, ನ್ಯಾಯ ಒದಗಿಸಿಕೊಡುವಂತೆ ಕುಟುಂಬ ಮೂಲಗಳು ಪಟ್ಟು ಹಿಡಿದಿದ್ದಾರೆ. ಆಸ್ಪತ್ರೆಯಲ್ಲಿ ನೂರಾರು ಜನರು ಜಮಾಯಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!