ಮಂಗಳೂರು ನಗರದ ಲಾಲ್‌ಬಾಗ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ ಪಾದಚಾರಿ ಮಾರ್ಗದ ಬದಿಯಲ್ಲೇ ಕಡಿಮೆ ಎತ್ತರದಲ್ಲಿ ಅಳವಡಿಸಲಾಗಿರುವ ಟ್ರಾನ್ಸ್ಫಾರ್ಮರ್ ಹಾಗೂ ಅದಕ್ಕೆ ಸಂಬಧಿಸಿದ ಹೈ ವೋಲ್ಟೇಜ್, ಲೋ ವೋಲ್ಟೇಜ್ ವಿದ್ಯುತ್ ಕೇಬಲ್‌ಗಳು ಇದ್ದು ಇದು ಅಪಾಯಕ್ಕೆ ಆಹ್ವಾನವನ್ನು ನೀಡುವಂತಿವೆ.
ಮುಂಗಾರು ಸಮೀಪಿಸುತ್ತಿರುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸುವ ಭೀತಿ ಹೆಚ್ಚಿದ್ದು, ಪ್ರತಿನಿತ್ಯ ಆ ಭಾಗದಲ್ಲಿ ಸಂಚರಿಸುವ ಪಾದಚಾರಿಗಳು ಹಾಗೂ ವಿದ್ಯಾರ್ಥಿಗಳ ಸುರಕ್ಷತೆ ಪ್ರಶ್ನಾರ್ಥಕವಾಗಿದೆ. ಅಪಾಯದ ಸೂಚನಾ ಫಲಕಗಳು ಅಥವಾ ಮುನ್ನೆಚ್ಚರಿಕಾ ವ್ಯವಸ್ಥೆಗಳು ಅಲ್ಲಿ ಇಲ್ಲದಿರುವುದು ಅಪಾಯಕ್ಕೆ ಆಸ್ಪದವನ್ನು ನೀಡುತ್ತದೆ. ವಿದ್ಯುತ್ ಸಾಧನಗಳು ಪಾದಚಾರಿ ಮಾರ್ಗಕ್ಕೆ ಅತೀ ಸಮೀಪದಲ್ಲಿರುವುದರಿಂದ ಯಾವುದೇ ಕ್ಷಣದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ.
ತಕ್ಷಣವೇ ಸಂಬಂಧಿತ ಇಲಾಖೆ ಹಾಗೂ ಸ್ಥಳೀಯ ಆಡಳಿತ ಎಚ್ಚೆತ್ತುಕೊಂಡು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು ಮುಂದೆ ನಡೆಯಬಹುದಾದ ಅಪಾಯವನ್ನು ತಡೆಗಟ್ಟಬೇಕು ಎಂಬುದು ಸಾರ್ವಜನಿಕ ಕಳಕಳಿಯಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…