ಜನ ಮನದ ನಾಡಿ ಮಿಡಿತ

Advertisement

ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ ಪಡೆದ ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ..!

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ ಪಡೆದು ಅಪೂರ್ವ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಸಮೃದ್ಧಿ, ಒಟ್ಟು 600 ಅಂಕಗಳಲ್ಲಿ 593 ಅಂಕಗಳನ್ನು ಗಳಿಸಿ ಕಾಲೇಜು ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಸಮೃದ್ಧಿ ಅವರು ತಮ್ಮ ಪ್ರೌಢಶಾಲಾ ಶಿಕ್ಷಣವನ್ನು ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಪೂರ್ಣಗೊಳಿಸಿದ್ದರು.

ವಿದ್ಯಾರ್ಥಿನಿಯ ಈ ಅದ್ಭುತ ಸಾಧನೆಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿ, ಪಿಟಿಎ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಮೇಲುಗೈಗೆ ಈ ಸಾಧನೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದೆ.

ಇದಲ್ಲದೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲೂ ಹೆಸರು ಗಳಿಸಿರುವ ಈಕೆ ಕ್ರೀಡೆಯಲ್ಲಿ, ನೃತ್ಯದಲ್ಲಿ ಅತ್ಯತ್ಭುತ ಸಾಧನೆಯನ್ನು ಮಾಡಿ ಸೈ ಎನಿಸಿಕೊಂಡಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!