2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ–2ರ ಫಲಿತಾಂಶ ಪ್ರಕಟವಾಗಿದ್ದು, ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ರಾಜ್ಯ ಮಟ್ಟದಲ್ಲಿ 8ನೇ ರ‍್ಯಾಂಕ್ ಪಡೆದು ಅಪೂರ್ವ ಸಾಧನೆ ಮಾಡಿದ್ದಾರೆ.
ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಸಮೃದ್ಧಿ, ಒಟ್ಟು 600 ಅಂಕಗಳಲ್ಲಿ 593 ಅಂಕಗಳನ್ನು ಗಳಿಸಿ ಕಾಲೇಜು ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಸಮೃದ್ಧಿ ಅವರು ತಮ್ಮ ಪ್ರೌಢಶಾಲಾ ಶಿಕ್ಷಣವನ್ನು ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಪೂರ್ಣಗೊಳಿಸಿದ್ದರು.
ವಿದ್ಯಾರ್ಥಿನಿಯ ಈ ಅದ್ಭುತ ಸಾಧನೆಗೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿ, ಪಿಟಿಎ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಮೇಲುಗೈಗೆ ಈ ಸಾಧನೆ ಮತ್ತೊಂದು ಹೆಮ್ಮೆಯ ಗರಿ ಮೂಡಿಸಿದೆ.
ಇದಲ್ಲದೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲೂ ಹೆಸರು ಗಳಿಸಿರುವ ಈಕೆ ಕ್ರೀಡೆಯಲ್ಲಿ, ನೃತ್ಯದಲ್ಲಿ ಅತ್ಯತ್ಭುತ ಸಾಧನೆಯನ್ನು ಮಾಡಿ ಸೈ ಎನಿಸಿಕೊಂಡಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…