ಜನ ಮನದ ನಾಡಿ ಮಿಡಿತ

Advertisement

ಕಡಬ: ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಭೀಕರ ಅಪ*ಘಾತ….!

ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡ ಘಟನೆ ನಡೆದಿದೆ.

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಹಾಗೂ ಧರ್ಮಸ್ಥಳ ಕಡೆಯಿಂದ ಸುಬ್ರಹ್ಮಣ್ಯದತ್ತ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಅವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲ್ಲರ್ ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು.

ಇತ್ತ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ್ನು ಶೇಟ್ ಮಲ್ಲಿಕಾ ಮದ್ರಾಸ್ ಅವರು ಚಲಾಯಿಸುತ್ತಿದ್ದರು. ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಎರಡೂ ವಾಹನಗಳು ಡಿಕ್ಕಿಯಾಗಿದೆ. ಅಪಘಾತದ ಪರಿಣಾಮವಾಗಿ ಟೆಂಪೋ ಟ್ರಾವೆಲ್ಸ್ ನಲ್ಲಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಕೆರೆಸಂದ್ರಮನೆ ನಿವಾಸಿ ಆಂಜನಮ್ಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಐದು ವರ್ಷದ ನಯಾನಿಕಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ನರಸಿಂಹಯ್ಯ, ವಿ. ಮಂಜುನಾಥ, ವಿ. ಗಂಗಾಧರ, ಪವಿತ್ರಾ, ಸಿರಿಪ್ರಿಯಾ ಹಾಗೂ ರತ್ನಮ್ಮ ಅವರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಲೋಕೇಶ್ ದೇವನಹಳ್ಳಿ, ಪವನ್ ಸೋಮನಹಳ್ಳಿ ಕನಕಪುರ, ಕವಿತಾ ಸಿ.ಎಂ., ಜೀವನ್, ಆಶಾ, ಪ್ರೀತಮ್ ಹಾಗೂ ಶಿವ ಅವರು ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!