ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡ ಘಟನೆ ನಡೆದಿದೆ.
ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿನತ್ತ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ಹಾಗೂ ಧರ್ಮಸ್ಥಳ ಕಡೆಯಿಂದ ಸುಬ್ರಹ್ಮಣ್ಯದತ್ತ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೆಂಗಳೂರು ದೇವನಹಳ್ಳಿ ಕೋಟೆ ನಿವಾಸಿ ಸಂಜು ವಿ. ಅವರು ಚಲಾಯಿಸುತ್ತಿದ್ದ ಟೆಂಪೋ ಟ್ರಾವೆಲ್ಲರ್ ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು.
ಇತ್ತ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ್ನು ಶೇಟ್ ಮಲ್ಲಿಕಾ ಮದ್ರಾಸ್ ಅವರು ಚಲಾಯಿಸುತ್ತಿದ್ದರು. ಕೆಂಜಳದ ಅಪಾಯಕಾರಿ ತಿರುವಿನಲ್ಲಿ ಎರಡೂ ವಾಹನಗಳು ಡಿಕ್ಕಿಯಾಗಿದೆ. ಅಪಘಾತದ ಪರಿಣಾಮವಾಗಿ ಟೆಂಪೋ ಟ್ರಾವೆಲ್ಸ್ ನಲ್ಲಿದ್ದ ಚಿಕ್ಕಬಳ್ಳಾಪುರ ತಾಲೂಕಿನ ಕೆರೆಸಂದ್ರಮನೆ ನಿವಾಸಿ ಆಂಜನಮ್ಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಐದು ವರ್ಷದ ನಯಾನಿಕಾ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ನರಸಿಂಹಯ್ಯ, ವಿ. ಮಂಜುನಾಥ, ವಿ. ಗಂಗಾಧರ, ಪವಿತ್ರಾ, ಸಿರಿಪ್ರಿಯಾ ಹಾಗೂ ರತ್ನಮ್ಮ ಅವರು ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಲೋಕೇಶ್ ದೇವನಹಳ್ಳಿ, ಪವನ್ ಸೋಮನಹಳ್ಳಿ ಕನಕಪುರ, ಕವಿತಾ ಸಿ.ಎಂ., ಜೀವನ್, ಆಶಾ, ಪ್ರೀತಮ್ ಹಾಗೂ ಶಿವ ಅವರು ಅಪಾಯದಿಂದ ಪಾರಾಗಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…