ಜಿಲ್ಲೆಯಾದ್ಯಂತ ಮುಸ್ಲಿಂ ಧರ್ಮಾನುಯಾಯಿಗಳು ಬಕ್ರೀದ್ ಹಬ್ಬವನ್ನು ಸಂಭ್ರಮ, ಸಡಗರದಿಂದ ಇಂದು ಆಚರಿಸಿದ್ದಾರೆ. ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ ಎಲ್ಲ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು.
ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು. ಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಪೂರ್ ಈದ್ ನಮಾಝ್ ನಲ್ಲಿ ಪಾಲ್ಗೊಂಡಿದ್ದಾರೆ. ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಬ್ರಹ್ಮಗಿರಿ ನಾಯರ್‌ಕೆರೆಯ ಹಾಶಿಮಿ ಮಸೀದಿಯ ಇಮಾಮ್ ಒಬೇದುರ ರಹ್ಮಾನ್ ನದ್ವಿ ಈದ್ ವಿಶೇಷ ನಮಾಝ್ ನಿರ್ವಹಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…