ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿ ಕರೆ ನೀಡಿದ್ದಾರೆ.
ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದಿರುವ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅಮ್ಮ, ಮನುಷ್ಯನು ಸಹಮಾನವರೊಂದಿಗೆ ಸಹಕಾರದಿಂದ, ಪ್ರಕೃತಿಯೊಂದಿಗೆ ಸೌಹಾರ್ದತೆಯಿಂದ ಮತ್ತು ಈಶ್ವರನ ಜೊತೆಗೆ ಸಂಪರ್ಕವಿರಿಸಿಕೊ0ಡು ಬದುಕುವುದನ್ನು ಕಲಿಯಬೇಕು ಎಂದು ಹೇಳಿದ್ದಾರೆ. ಸಾಂಕ್ರಾಮಿಕ ರೋಗಗಳು, ನೈಸರ್ಗಿಕ ವಿಕೋಪಗಳು ಮತ್ತು ಹವಾಮಾನ ವೈಪರೀತ್ಯಗಳು ಪ್ರಕೃತಿಯೊಂದಿಗಿನ ನಮ್ಮ ಸಂಬ0ಧವನ್ನು ಮರುಚಿಂತನೆ ಮಾಡಲು ಮಾನವಕುಲಕ್ಕೆ ನೀಡುತ್ತಿರುವ ಎಚ್ಚರಿಕೆಯ ಕರೆಗಳಾಗಿವೆ ಎಂದು ಅವರು ತಿಳಿಸಿದ್ದಾರೆ. ಜನರು, ಸಮುದಾಯಗಳು ಮತ್ತು ರಾಷ್ಟ್ರಗಳ ನಡುವಿನ ಸಂಘರ್ಷಗಳಲ್ಲಿ ಸಂಧಾನ ಹಾಗೂ ರಾಜಿ ಸೂತ್ರಗಳು ಕೆಲಸ ಮಾಡಬಹುದು, ಆದರೆ ಪ್ರಕೃತಿಯೊಂದಿಗೆ ಇವುಗಳು ನಡೆಯುವುದಿಲ್ಲ ಎಂದು ಅಮ್ಮ ನುಡಿದರು. “ಪ್ರಕೃತಿಯನ್ನು ಸಮೀಪಿಸಲು ಇರುವ ಏಕೈಕ ಪರಿಣಾಮಕಾರಿ ಮಾರ್ಗವೆಂದರೆ, ಅಹಂಕಾರವನ್ನು ತೊರೆದು, ತಲೆಬಾಗಿ, ವಿನಯ, ಸ್ನೇಹ ಮತ್ತು ಪೂಜ್ಯಭಾವನೆಯಿಂದ ತುಂಬಿದ ಹೃದಯದೊಂದಿಗೆ ಆಕೆಯನ್ನು ಆರಾಧಿಸುವುದಾಗಿದೆ” ಎಂದು ಅವರು ಹೇಳಿದರು. ಮಾನವರು ಈ ಭೂಮಿ, ಅದರ ನೈಸರ್ಗಿಕ ಸಂಪನ್ಮೂಲಗಳು ಮತ್ತು ಸಮೃದ್ಧಿಯನ್ನು ಸಹಜೀವಿಗಳು ಹಾಗೂ ಇತರ ಪ್ರಾಣಿ-ಪಕ್ಷಿಗಳೊಂದಿಗೆ ಸಾಮೂಹಿಕವಾಗಿ ಹಂಚಿಕೊ0ಡು ಬದುಕಬೇಕು ಎಂಬ ಜಾಗೃತಿಯೇ ನಿಜವಾದ ಸಹಬಾಳ್ವೆಗೆ ಅಡಿಪಾಯವಾಗಿದೆ ಎಂದು ಅಮ್ಮ ಅಭಿಪ್ರಾಯಪಟ್ಟಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಲ್ಲಿ ಸ್ವಾಮಿ ಜಿತಕಾಮಾನಂದ, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ,ಉಡುಪಿಯ ಶಾಸಕರಾದ ಯಶಪಾಲ್ ಸುವರ್ಣ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…